ಎಫ್ ಡಿ ಎ ಕೆಲಸ ಕೊಡಿಸುವುದಾಗಿ ವಂಚನೆ | ಪಿಎಸ್ಐ ಅಶ್ವಿನಿ ಅಮಾನತು |

September 19, 2022
7:52 PM

ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣೆ ಪಿಎಸ್‌ಐ ಆಗಿರುವ ಅಶ್ವಿನಿ ಅನಂತಪುರ 2020ರಲ್ಲಿ ನಡೆದ ಎಫ್ ಡಿ ಎ ಪರೀಕ್ಷೆಯಲ್ಲಿ ಆಯ್ಕೆ ಮಾಡಿಸುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ಬಸವರಾಜ್ ಝಳಕಿ ಎಂಬವರಿಂದ ಹಣ ಪಡೆದು ವಂಚನೆ ಮಾಡಿದ್ದರು. ಬಸವರಾಜ್ ಸಹೋದರ ಸಂಗಮೇಶ್ ಜೊತೆ ಅಶ್ವಿನಿ ಡೀಲ್ ಮಾಡಿದ್ದು ಹಾಗೂ ಹಣದ ವ್ಯವಹಾರದ ಬಗ್ಗೆ ಅವರೊಂದಿಗೆ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು.

ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಅಶ್ವಿನಿ 15 ಲಕ್ಷ ರೂಪಾಯಿ ಬೇಡಿಕೆಯನ್ನು ಇಟ್ಟಿದ್ದರು. ಮುಂಗಡವಾಗಿ 2 ಲಕ್ಷ ಪಡೆದಿದ್ದರು. ಕೆಲಸ ಸಿಗದಿದ್ದಾಗ ಹಣ ವಾಪಸ್ ಕೇಳಿದ್ದಕ್ಕೆ ಅಶ್ವಿನಿ ಆವಾಜ್ ಹಾಕಿದ್ದರು. ಇತ್ತೀಚೆಗೆ ಅಶ್ವಿನಿ ಹಾಗೂ ಸಂಗಮೇಶ್ ನಡುವಿನ ಆಡಿಯೋ ಸಂಭಾಷಣೆ ವೈರಲ್ ಆಗಿತ್ತು. ಈ ಪ್ರಕರಣದ ಬಗ್ಗೆ ಪಿಎಸ್‌ಐ ಅಶ್ವಿನಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror