ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣೆ ಪಿಎಸ್‌ಐ ಆಗಿರುವ ಅಶ್ವಿನಿ ಅನಂತಪುರ 2020ರಲ್ಲಿ ನಡೆದ ಎಫ್ ಡಿ ಎ ಪರೀಕ್ಷೆಯಲ್ಲಿ ಆಯ್ಕೆ ಮಾಡಿಸುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ಬಸವರಾಜ್ ಝಳಕಿ ಎಂಬವರಿಂದ ಹಣ ಪಡೆದು ವಂಚನೆ ಮಾಡಿದ್ದರು. ಬಸವರಾಜ್ ಸಹೋದರ ಸಂಗಮೇಶ್ ಜೊತೆ ಅಶ್ವಿನಿ ಡೀಲ್ ಮಾಡಿದ್ದು ಹಾಗೂ ಹಣದ ವ್ಯವಹಾರದ ಬಗ್ಗೆ ಅವರೊಂದಿಗೆ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು.
ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಅಶ್ವಿನಿ 15 ಲಕ್ಷ ರೂಪಾಯಿ ಬೇಡಿಕೆಯನ್ನು ಇಟ್ಟಿದ್ದರು. ಮುಂಗಡವಾಗಿ 2 ಲಕ್ಷ ಪಡೆದಿದ್ದರು. ಕೆಲಸ ಸಿಗದಿದ್ದಾಗ ಹಣ ವಾಪಸ್ ಕೇಳಿದ್ದಕ್ಕೆ ಅಶ್ವಿನಿ ಆವಾಜ್ ಹಾಕಿದ್ದರು. ಇತ್ತೀಚೆಗೆ ಅಶ್ವಿನಿ ಹಾಗೂ ಸಂಗಮೇಶ್ ನಡುವಿನ ಆಡಿಯೋ ಸಂಭಾಷಣೆ ವೈರಲ್ ಆಗಿತ್ತು. ಈ ಪ್ರಕರಣದ ಬಗ್ಗೆ ಪಿಎಸ್‌ಐ ಅಶ್ವಿನಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…