ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ – ಮಂಗಳೂರಿನಲ್ಲಿ ದಂಡ ವಿಧಿಸಿ ಎಚ್ಚರಿಕೆ

November 23, 2026
7:36 PM
ಮಂಗಳೂರಿನ ಲಾಲ್‌ಬಾಗ್, ಪಂಪ್‌ವೆಲ್ ಸೇರಿದಂತೆ ವಿವಿಧೆಡೆ ಸಾರ್ವಜನಿಕವಾಗಿ ಧೂಮಪಾನ ಮಾಡುತ್ತಿದ್ದವರಿಗೆ ಆರೋಗ್ಯ ಇಲಾಖೆ ಮತ್ತು ಪೊಲೀಸರು ದಂಡ ವಿಧಿಸಿದ್ದಾರೆ. ಶಾಲಾ-ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮತ್ತು ಬಳಕೆಗೆ ನಿಷೇಧವಿದ್ದು, ಉಲ್ಲಂಘನೆಗೆ ₹1,000 ವರೆಗೆ ದಂಡ ವಿಧಿಸಬಹುದು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಹಯೋಗದಲ್ಲಿ ಸೋಮವಾರ ಮಂಗಳೂರಿನ ಲಾಲ್‌ಬಾಗ್, ಪಂಪ್‌ವೆಲ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಾರ್ವಜನಿಕವಾಗಿ ಧೂಮಪಾನ ಮಾಡುತ್ತಿದ್ದವರಿಗೆ ತಿಳುವಳಿಕೆ ನೀಡಿ ದಂಡ ವಿಧಿಸಲಾಯಿತು.

ಅಂಗಡಿ ಮಾಲೀಕರಿಗೂ ಬಿಡಿ ಸಿಗರೇಟ್ ಮಾರಾಟ ಮಾಡದಂತೆ ಎಚ್ಚರಿಕೆ ನೀಡಲಾಯಿತು. ತಂಬಾಕು ನಿಯಂತ್ರಣ ಕಾಯ್ದೆಯ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಮಾತ್ರವಲ್ಲದೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆಯನ್ನೂ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದವರಿಗೆ 1,000 ರೂ.ವರೆಗೆ ದಂಡ ವಿಧಿಸಬಹುದಾಗಿದೆ ಎಂದು ತಿಳಿಸಲಾಗಿದೆ.

21 ವರ್ಷದೊಳಗಿನ ಮಕ್ಕಳು ತಂಬಾಕು ಉತ್ಪನ್ನಗಳನ್ನು ಬಳಸುವುದು ಮತ್ತು ಸಾಗಾಟ ಮಾಡುವುದು ಅಪರಾಧವಾಗಿದೆ. ಅಲ್ಲದೆ, ಶಾಲಾ-ಕಾಲೇಜುಗಳ 100 ಮೀಟರ್ ವ್ಯಾಪ್ತಿಯೊಳಗೆ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಸೇವನೆಯೂ ನಿಷಿದ್ಧವಾಗಿದ್ದು, ಉಲ್ಲಂಘನೆಗೆ 1,000 ರೂ.ವರೆಗೆ ದಂಡ ವಿಧಿಸಲು ಅವಕಾಶವಿದೆ.

ಭಾರತ ಸರ್ಕಾರದ ಆಶಯದಂತೆ ಆರಂಭಿಸಿರುವ ‘ತಂಬಾಕು ಮುಕ್ತ ಯುವ ಅಭಿಯಾನ’ದ ಮುಖ್ಯ ಉದ್ದೇಶ ಯುವಜನರನ್ನು ತಂಬಾಕಿನ ದುಷ್ಪರಿಣಾಮಗಳಿಂದ ರಕ್ಷಿಸುವುದಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಯುವಜನರು ತಂಬಾಕು ಉತ್ಪನ್ನಗಳಿಂದ ದೂರವಿರಬೇಕು ಎಂದು ಇಲಾಖೆ ಮನವಿ ಮಾಡಿದೆ.

ಕಾರ್ಯಾಚರಣೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್, ಪೊಲೀಸ್ ಸಿಬ್ಬಂದಿ ಹಾಗೂ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿ ಭಾಗವಹಿಸಿದ್ದರು.

Mangaluru’s District Health and Family Welfare Department, in association with the District Tobacco Control Cell and Police Department, conducted an enforcement drive at Lalbagh, Pumpwell and other areas. People smoking in public places were penalised and shopkeepers were warned against selling single cigarettes. Violations of tobacco control regulations, including restrictions near educational institutions and involving minors, can attract fines of up to ₹1,000.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂತೃಪ್ತಿಯೇ ಆನಂದದ‌ ಬದುಕಿನ ಗುಟ್ಟು
November 23, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-11-2026 | ನ.24 ರಿಂದ ಮಲೆನಾಡು, ನ.25 ರಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ
November 23, 2026
12:09 PM
by: ಸಾಯಿಶೇಖರ್ ಕರಿಕಳ
ಚಾಮಡ್ಕ ಜಲಪಾತದಲ್ಲಿ ಸ್ವಚ್ಛತಾ ಸಂಭ್ರಮ – ಮಕ್ಕಳ ಚಿತ್ರಗಳಲ್ಲಿ ಪರಿಸರ ಕಾಳಜಿಯ ಸಂದೇಶ
November 23, 2026
12:01 PM
by: ದ ರೂರಲ್ ಮಿರರ್.ಕಾಂ
Rubber tapper collecting latex in a natural rubber plantation
ಮತ್ತೆ ಇಳಿಕೆಯಾದ ರಬ್ಬರ್‌ ಬೆಲೆ – ರಬ್ಬರ್ ಬೆಳೆಗಾರರಿಗೆ ಮತ್ತೆ ಬೆಲೆ ಇಳಿಕೆಯ ಆತಂಕ
November 23, 2026
11:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror