ಕಳೆದ ಮಾರ್ಚ್ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಏಪ್ರಿಲ್ 21 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಶುಕ್ರವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 11 ಗಂಟೆಯ ನಂತರ ಇಲಾಖೆಯ ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ಕಳೆದ ಮಾರ್ಚ್ 9 ರಿಂದ 29ರ ವರೆಗೆ 2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲಾಗಿತ್ತು. ಸುಮಾರು 7.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಸದ್ಯ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಶಿಕ್ಷಣ ಸಚಿವರು ಫಲಿತಾಂಶ ಪ್ರಕಟ ಮಾಡುವುದಿಲ್ಲ. ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಫಲಿತಾಂಶ ಪ್ರಕಟಮಾಡಲಿದ್ದಾರೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…