ಸ್ಯಾಂಡಲ್‌ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿರುವ ಮೈಸೂರು ವಿಶ್ವವಿದ್ಯಾನಿಲಯವು ಮರಣೋತ್ತರ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಘೋಷಿಸಿದೆ.
ಈ ಕುರಿತು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಹೇಮಂತ್ ಕುಮಾರ್ ಘೋಷಣೆ ಮಾಡಿದ್ದಾರೆ.
ಪುನೀತ್ ರಾಜ್ ಕುಮಾರ್ ಪರವಾಗಿ ಗೌರವ ಡಾಕ್ಟರೇಟ್ ಪಡೆಯಲು ಅವರ ಪತ್ನಿ ಅಶ್ವಿನಿ ಸಮ್ಮತಿಸಿದ್ದಾರೆ. ಮಾ. 22ರಂದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel