ಖ್ಯಾತ ಚಲನಚಿತ್ರನಟ ಪುನೀತ್‍ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಆಘಾತವಾಯಿತು.ಅವರ ನೇರ ನಡೆ-ನುಡಿ, ಸಜ್ಜನಿಕೆ ಮತ್ತು ಸರಳ ವ್ಯಕ್ತಿತ್ವವನ್ನು ನಾನು ಕೂಡಾ ಮೆಚ್ಚಿಕೊಂಡಿದ್ದೇನೆ. ಅವರ ಭಾವಪೂರ್ಣ ನಟನೆಯಿಂದಾಗಿ ಅವರು ಕನ್ನಡಿಗರ ವಿಶೇಷ ಅಭಿಮಾನ ಮತ್ತುಗೌರವಕ್ಕೆ ಪಾತ್ರರಾಗಿದ್ದರು. ಅವರು ವಿಧಿವಶರಾಗಿರುವುದು ನಮಗೆಲ್ಲರಿಗೂ ತೀವ್ರ ದುಃಖವನ್ನುಂಟುಮಾಡಿದೆ. ಅವರ ಅಭಿಮಾನಿಗಳೆಲ್ಲರೂ ಈ ಸಂದರ್ಭವನ್ನು ತಾಳ್ಮೆಯಿಂದ ಸ್ವೀಕರಿಸಿ ಅವರ ಆತ್ಮಕ್ಕೆ ಚಿರಶಾಂತಿ ಕೋರೋಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ.
ಅವರು ಧರ್ಮಸ್ಥಳದಲ್ಲಿ ಒಂದೆರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಿರುತ್ತಾರೆ. ನಾನು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನುಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…