ದೇಶವಾಸಿಗಳಿಗೆ ಅಗತ್ಯ ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಸರ್ಕಾರ ಸಿರಿಧಾನ್ಯ ಖರೀದಿಯನ್ನು ಹೆಚ್ಚಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂರನೇ ಅವಧಿ ಆಡಳಿತದಲ್ಲಿ ಹಿಂದೆಂದಿಗಿಂತ ಅಧಿಕ ಸಿರಿಧಾನ್ಯ ಖರೀದಿ ಮಾಡುತ್ತಿದೆ ಎಂದರು. ಕೇಂದ್ರ ಸರ್ಕಾರ, 2023-24 ರ ಮುಂಗಾರು ಮಾರುಕಟ್ಟೆ ಋತುವಿನಲ್ಲಿ12.49 ಲಕ್ಷ ಮೆಟ್ರಿಕ್ ಟನ್ ಸಿರಿಧಾನ್ಯ ಖರೀದಿ ಮಾಡಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇಕಡ 170 ರಷ್ಟು ಸಿರಿಧಾನ್ಯಗಳ ಖರೀದಿ ಹೆಚ್ಚಳ ಕಂಡಿರುವುದು ಗಮನಾರ್ಹ ಸಂಗತಿಯಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel