ಭಾರತ ಬದಲಾಗುತ್ತಿದೆ…!. ಜುಲೈ 2018 ರಲ್ಲಿ ಚಾಲನೆಗೊಂಡ ಯೋಜನೆಯೊಂದು 2020 ನವೆಂಬರ್ ವೇಳೆಗೆ ಬಹುಪಾಲು ಕೊನೆಯಾಗಿದೆ. ಅದೂ 341 ಕಿಮೀ ಉದ್ದದ ರಸ್ತೆ…!. ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್‌ಪ್ರೆಸ್ ವೇ ಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟಿಸಿದರು. ಇದೇ ರಸ್ತೆಯಲ್ಲಿ ತುರ್ತು ಸಂದರ್ಭದಲ್ಲಿ ವಿಮಾನ ಲ್ಯಾಂಡ್ ಆಗುವ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಇಂದು ಪ್ರಧಾನಿಗಳು ಕೂಡಾ ಭಾರತೀಯ ವಾಯುಪಡೆಯವ ವಿಮಾನದಲ್ಲಿ ರಸ್ತೆಯಲ್ಲಿ ಬಂದಿಳಿದರು..!.
ಸುಮಾರು 341 ಕಿಲೋಮೀಟರ್ ಉದ್ದದ ಎಕ್ಸ್‌ಪ್ರೆಸ್ ವೇ ಲಕ್ನೋ- ಸುಲ್ತಾನ್‌ಪುರ ಹೆದ್ದಾರಿಯ ಚಾಂದಸಾರೈ ಗ್ರಾಮದಿಂದ ಪ್ರಾರಂಭವಾಗುತ್ತದೆ. ಜುಲೈ 2018 ರಲ್ಲಿ ಅಜಂಗಢದಲ್ಲಿ ಪ್ರಧಾನಿ ಮೋದಿ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಯೋಜನೆಗೆ ಚಾಲನೆ ನೀಡಿದ್ದರು. ಸುಮಾರು 22,500 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎಕ್ಸ್‌ಪ್ರೆಸ್ ವೇ ಕೆಲಸ ಇನ್ನೂ ನಡೆಯುತ್ತಿದ್ದು, ದೀರ್ಘ ಪ್ರಯಾಣದಲ್ಲಿ ಅಗತ್ಯವಿರುವ ಇತರ ಸೌಕರ್ಯಗಳನ್ನು ಹೊಂದಿರುವುದಿಲ್ಲ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…