ರಾಜಧಾನಿ ದೆಹಲಿಯಲ್ಲಿ ನಡೆದ ಪೂಸಾ ಕೃಷಿ ವಿಜ್ಞಾನ ಮೇಳಕ್ಕೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಚಾಲನೆ ನೀಡಿ, ವಿವಿಧ ಕೃಷಿ ತಂತ್ರಜ್ಞಾನ ಹಾಗೂ ಪ್ರದರ್ಶನಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಪೂರೈಕೆ ಮಾಡಲು ಸರ್ಕಾರ ಆದ್ಯತೆ ನೀಡಿದ್ದು, ನಕಲಿ ಬಿತ್ತನೆ ಬೀಜ ಮತ್ತು ಕ್ರಿಮಿನಾಶಕಗಳ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ದೇಶದ ರೈತರಿಗೆ ಇದುವರೆಗೆ ₹1 ಲಕ್ಷ 92 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು. ಈ ಯೋಜನೆ ರೈತರಿಗೆ ಬೆಳೆ ನಷ್ಟದಿಂದ ಆರ್ಥಿಕ ರಕ್ಷಣೆ ನೀಡುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದರು. ರೈತರಿಗೆ ಸುಲಭವಾಗಿ ಕೃಷಿ ಸಾಲ ದೊರೆಯಲು ವಿಶೇಷ ಗುರುತಿನ ಚೀಟಿ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ. ಇದು ರೈತರಿಗೆ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಲು ಅನುಕೂಲವಾಗಲಿದೆ ಎಂದು ಹೇಳಿದರು.
ಕೃಷಿಯನ್ನು ಆಧುನಿಕಗೊಳಿಸಲು ಯಾಂತ್ರೀಕರಣ, ಹನಿ ನೀರಾವರಿ, ತುಂತುರು ನೀರಾವರಿ, ಪಾಲಿಹೌಸ್ ಮತ್ತು ಗ್ರೀನ್‌ಹೌಸ್ ತಂತ್ರಜ್ಞಾನಗಳ ಬಳಕೆಗೆ ಸರ್ಕಾರ ಉತ್ತೇಜನ ನೀಡುತ್ತಿದೆ. ಇದರಿಂದ ಇಳುವರಿ ಹೆಚ್ಚಳ ಹಾಗೂ ರೈತರ ಆದಾಯವನ್ನು ದ್ವಿಗುಣಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಸರ್ಕಾರದ ವಿವಿಧ ಕೃಷಿ ಯೋಜನೆಗಳನ್ನು ದೇಶದ ಪ್ರತಿಯೊಬ್ಬ ರೈತನಿಗೂ ತಲುಪಿಸುವುದು ಸರ್ಕಾರದ ಪ್ರಮುಖ ಆದ್ಯತೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ತಂತ್ರಜ್ಞಾನ ಬಳಕೆ ಹಾಗೂ ನವೀನ ಕ್ರಮಗಳನ್ನು ಮುಂದುವರಿಸಲಾಗುವುದು ಎಂದರು.
Union Agriculture Minister Shivraj Singh Chouhan inaugurated the Pusa Krishi Vigyan Mela in New Delhi and stated that ₹1.92 lakh crore has been released to farmers under the PM Fasal Bima Yojana. The government is also promoting modern agriculture, ensuring fertilizer supply, and implementing schemes to increase farmers’ income.

