Advertisement
MIRROR FOCUS

ನಕಲಿ ಬಿತ್ತನೆ ಬೀಜ ಮತ್ತು ಕ್ರಿಮಿನಾಶಕಗಳ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ

Share

ರಾಜಧಾನಿ ದೆಹಲಿಯಲ್ಲಿ ನಡೆದ ಪೂಸಾ ಕೃಷಿ ವಿಜ್ಞಾನ ಮೇಳಕ್ಕೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಚಾಲನೆ ನೀಡಿ, ವಿವಿಧ ಕೃಷಿ ತಂತ್ರಜ್ಞಾನ ಹಾಗೂ ಪ್ರದರ್ಶನಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಪೂರೈಕೆ ಮಾಡಲು ಸರ್ಕಾರ ಆದ್ಯತೆ ನೀಡಿದ್ದು, ನಕಲಿ ಬಿತ್ತನೆ ಬೀಜ ಮತ್ತು ಕ್ರಿಮಿನಾಶಕಗಳ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ದೇಶದ ರೈತರಿಗೆ ಇದುವರೆಗೆ ₹1 ಲಕ್ಷ 92 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು. ಈ ಯೋಜನೆ ರೈತರಿಗೆ ಬೆಳೆ ನಷ್ಟದಿಂದ ಆರ್ಥಿಕ ರಕ್ಷಣೆ ನೀಡುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದರು. ರೈತರಿಗೆ ಸುಲಭವಾಗಿ ಕೃಷಿ ಸಾಲ ದೊರೆಯಲು ವಿಶೇಷ ಗುರುತಿನ ಚೀಟಿ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ. ಇದು ರೈತರಿಗೆ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಲು ಅನುಕೂಲವಾಗಲಿದೆ ಎಂದು ಹೇಳಿದರು.

ಕೃಷಿಯನ್ನು ಆಧುನಿಕಗೊಳಿಸಲು ಯಾಂತ್ರೀಕರಣ, ಹನಿ ನೀರಾವರಿ, ತುಂತುರು ನೀರಾವರಿ, ಪಾಲಿಹೌಸ್ ಮತ್ತು ಗ್ರೀನ್‌ಹೌಸ್ ತಂತ್ರಜ್ಞಾನಗಳ ಬಳಕೆಗೆ ಸರ್ಕಾರ ಉತ್ತೇಜನ ನೀಡುತ್ತಿದೆ. ಇದರಿಂದ ಇಳುವರಿ ಹೆಚ್ಚಳ ಹಾಗೂ ರೈತರ ಆದಾಯವನ್ನು ದ್ವಿಗುಣಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಸರ್ಕಾರದ ವಿವಿಧ ಕೃಷಿ ಯೋಜನೆಗಳನ್ನು ದೇಶದ ಪ್ರತಿಯೊಬ್ಬ ರೈತನಿಗೂ ತಲುಪಿಸುವುದು ಸರ್ಕಾರದ ಪ್ರಮುಖ ಆದ್ಯತೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ತಂತ್ರಜ್ಞಾನ ಬಳಕೆ ಹಾಗೂ ನವೀನ ಕ್ರಮಗಳನ್ನು ಮುಂದುವರಿಸಲಾಗುವುದು ಎಂದರು.

Union Agriculture Minister Shivraj Singh Chouhan inaugurated the Pusa Krishi Vigyan Mela in New Delhi and stated that ₹1.92 lakh crore has been released to farmers under the PM Fasal Bima Yojana. The government is also promoting modern agriculture, ensuring fertilizer supply, and implementing schemes to increase farmers’ income.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಳುಮೆಣಸು ಕೃಷಿಯಲ್ಲಿ ಟೆಕ್ ಕ್ರಾಂತಿ | ಟಿಶ್ಯೂ ಕಲ್ಚರ್‌ ವಿಧಾನದಿಂದ ಇಳುವರಿ ಹೆಚ್ಚಳ – ಕೃಷಿ ಸಚಿವರ ಭೇಟಿ

ಹೊಸ ತಂತ್ರಜ್ಞಾನಗಳಿಂದ ಕಾಳುಮೆಣಸು ಕೃಷಿಯಲ್ಲಿ ಇಳುವರಿ ಮೂರು ಪಟ್ಟು ಹೆಚ್ಚಾಗುವ ಸಾಧ್ಯತೆ ಕಂಡುಬಂದಿದ್ದು,…

22 minutes ago

ಹವಾಮಾನ ವರದಿ | 19-03-2026 | ಇಂದು ಗುಡುಗು ಮಳೆ ಅಬ್ಬರ… ನಾಳೆಯಿಂದ ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತದಾ?

ರಾಜ್ಯದ ಹಲವೆಡೆ ಇಂದು ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.…

18 hours ago

ಶಾಸ್ತ್ರ ಮತ್ತು ಆಧುನಿಕತೆಯ ಸಮನ್ವಯದ ಹಬ್ಬ — ಯುಗಾದಿ

ಯುಗಾದಿ ಹಬ್ಬವು ಕೇವಲ ಹೊಸ ವರ್ಷದ ಆರಂಭವಲ್ಲ; ಅದು ಕಾಲತತ್ತ್ವ, ಪ್ರಕೃತಿ ಚಕ್ರ…

23 hours ago

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

2 days ago

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

2 days ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

2 days ago