ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಕಳೆದ ಹಲವು ಸಮಯಗಳಿಂದ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ. ಈಚೆಗೆ ಮರಳುಗಾರಿಕೆ, ಕೆಂಪು ಕಲ್ಲು ಗಣಿಗಾರಿಕೆಯೂ ಸತತವಾಗಿ ಅಕ್ರಮವಾಗಿ ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಮೌನ ವಹಿಸಿರುವುದು ಬೆಳಕಿಗೆ ಬಂದಿದೆ. ಇದೀಗ ಈ ಘಟನೆಗಳು ಹೈಕೋರ್ಟ್ ಗಮನಕ್ಕೆ ಬಂದಿದ್ದು ಎರಡು ದಿನಗಳ ಹಿಂದೆ ಆದ ಆದೇಶವೊಂದರಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ ತನಿಖೆ ನಡೆಸಿ ವರದಿ ನೀಡಲು ಹೈಕೋರ್ಟ್ ನಿರ್ದೇಶನ ನೀಡಿದೆ.
ಪಶ್ಚಿಮ ಘಟ್ಟದ ಪ್ರದೇಶದ ಮೇಲೆ ಇದರಿಂದ ಪರಿಸರದ ಮೇಲೆ ತೀವ್ರ ಹಾನಿಯಾಗುತ್ತಿದೆ ಎಂದು ಹಲವಾರು ಸಮಯಗಳಿಂದ ಆಕ್ಷೇಪ ಇತ್ತು. ಆದರೆ ಯಾವುದೂ ಪ್ರಯೋಜನ ಆಗಿರಲಿಲ್ಲ. ಈಚೆಗೆ ಸುಳ್ಯ ತಾಲೂಕಿನ ಪ್ರಕರಣವೊಂದರ ಆಧಾರದಲ್ಲಿ ಸುಳ್ಯದ ಬೋಜಪ್ಪ ನಾಯ್ಕ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು ಈ ಅರ್ಜಿಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ್ ನೇತೃತ್ವದ ವಿಭಾಗೀಯ ಪೀಠ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.
ಕೇಂದ್ರ ಸರ್ಕಾರದ ಈ ಬಾರಿ ಬಜೆಟ್ ಮೇಲೆ ರೈತಾಪಿ ವರ್ಗ ಬಹಳ ನಿರೀಕ್ಷೆ…
ಸಾರಡ್ಕದಲ್ಲಿ ನಡೆದ ಕೃಷಿಹಬ್ಬದ ಬಗ್ಗೆ ಸಾವಯವ ಕೃಷಿಕ ಎ ಪಿ ಸದಾಶಿವ ಅವರ…
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ.…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ…
ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು…