ಚುನಾವಣಾ ಕಣ ಈಗ ಚುರುಕಾಗುತ್ತಿದೆ. ಅದರಲ್ಲೂ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯ ಬಿಡುಗಡೆಗೆ ಕೊನೆಯ ಹಂತದಲ್ಲಿದೆ. ಕೊನೆಯ ಕ್ಷಣದಲ್ಲೂ ಪ್ರಯತ್ನಗಳು ಸಾಗಿವೆ. ಇದೀಗ ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ಟಿಕೆಟ್ ಸಿಗಬೇಕು ಎಂಬ ಅಭಿಯಾನ, ಒತ್ತಡ ಹೆಚ್ಚಿದೆ. #PuttilaForPuttur ಎಂಬ ಟ್ವಿಟ್ಟರ್ ಅಭಿಯಾನ ಸದ್ದು ಮಾಡುತ್ತಿದೆ. ಈ ಹಿಂದೆಯೂ ಟ್ವಿಟ್ಟರ್ ಅಭಿಯಾನ ಸದ್ದು ಮಾಡಿತ್ತು. ಇದೀಗ ಮತ್ತೆ ನೂರಾರು ಜನರು ಟ್ವೀಟ್ ಮಾಡುತ್ತಿದ್ದಾರೆ. ಕರ್ನಾಟಕದ ಸುದ್ದಿಗಳಲ್ಲಿ ಈಗ ಸುದ್ದಿಯಾಗಿರುವ ಸಂಗತಿಯಾಗಿದೆ.
ಈಚೆಗೆ ನಡೆದ ಬೆಳವಣಿಗೆಯಲ್ಲಿ ಹಾಲಿ ಶಾಸಕರು, ಸಚಿವರಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆಯಾಗಿದೆ. ಅದರಲ್ಲಿ ಪುತ್ತೂರು ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಿಗೆ ಹಾಲಿ ಶಾಸಕರುಗಳನ್ನೇ ಅಂತಿಮ ಮಾಡುವ ಚರ್ಚೆ ನಡೆದಿದೆ ಎಂದು ಮೂಲಗಳು ಹೇಳಿವೆ. ಪುತ್ತೂರಿನಲ್ಲಿ ಚುನಾವಣೆಯ ಹೊತ್ತಿನಲ್ಲಿ ಆರೋಪಗಳು ಬಂದ ಹಿನ್ನೆಲೆಯಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಕೇಳಿಬಂದಿದೆ. ಇದಕ್ಕಾಗಿ ಆಕಾಂಕ್ಷಿಗಳ ಪಟ್ಟಿ, ಜಾತೀವಾರು ಪಟ್ಟಿಗಳು ಮುನ್ನೆಲೆಗೆ ಬರುವ ಸಂದರ್ಭದಲ್ಲಿ ಪುತ್ತಿಲ ಅಭಿಮಾನಿಗಳು, ಕೆಲ ಕಾರ್ಯಕರ್ತರು ಟ್ವೀಟ್ ಮೂಲಕ ಗಮನಸೆಳೆಯುತ್ತಿದ್ದಾರೆ. ಇದೀಗ ಟ್ವಿಟ್ಟರ್ ಅಭಿಯಾನ ಚುರುಕಾಗಿದೆ.
ಸುಳ್ಯ ಕ್ಷೇತ್ರದಲ್ಲೂ ಅಭ್ಯರ್ಥಿ ಬದಲಾವಣೆಯ ಬಗ್ಗೆ ನಿನ್ನೆ ಬಿಡುಗಡೆಯಾಗಬೇಕಿದ್ದ ಬಿಜೆಪಿಯ ಪಟ್ಟಿಯ ಮೂಲಕವೂ ಗಮನ ಸಳೆದಿತ್ತು, ಆದರೆ ಕೊನೆಯ ಕ್ಷಣದಲ್ಲಿ ಮತ್ತೆ ಹಾಲಿ ಶಾಸಕರುಗಳಿಗೇ ಟಿಕೆಟ್ ಘೋಷಣೆಯ ಸಂದರ್ಭದಲ್ಲಿ ಮತ್ತೆ ಅಂಗಾರ ಅವರಿಗೇ ಟಿಕೆಟ್ ಲಭ್ಯವಾಗುವ ಸಾಧ್ಯತೆಯ ಬಗ್ಗೆ ಕೇಳಿಬಂದಿದೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…