ಚುನಾವಣೆಯ ಪೂರ್ವದ ಬಿಜೆಪಿ ಟಿಕೆಟ್‌ ವಿಚಾರ | ಪುತ್ತೂರಿನ ವ್ಯಕ್ತಿಯ ಹೆಸರು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ | ಪುತ್ತಿಲ ಪರಿವಾರದಿಂದ ಸ್ಪಷ್ಟನೆ |

September 29, 2023
4:22 PM
ಯಾರದೇ ವೈಯಕ್ತಿಕ ವ್ಯವಹಾರಕ್ಕೂ  ಪುತ್ತಿಲ ಪರಿವಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪುತ್ತಿಲ ಪರಿವಾರ ಸ್ಪಷ್ಟನೆ ನೀಡಿದೆ.

ಚುನಾವಣಾ ಪೂರ್ವದಲ್ಲಿ ಬಿಜೆಪಿ ಟಿಕೆಟ್‌ ವಿಚಾರದಲ್ಲಿ ಹಗರಿಬೊಮ್ಮನಹಳ್ಳಿಯ ಕ್ಷೇತ್ರದ ರಾಷ್ಟ್ರೀಯ ಪಕ್ಷದ ಟಿಕೇಟ್ ವಿಷಯದಲ್ಲಿ ನಾಯಕರ ನಡುವೆ ಚುನಾವಣ ಪೂರ್ವ ವ್ಯವಹಾರವಾಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಇದರಲ್ಲಿ ಪುತ್ತಿಲ ಪರಿವಾರದಲ್ಲಿ ಕೆಲಸ ಮಾಡಿರುವ ವ್ಯಕ್ತಿಯ ಹೆಸರು ಉಲ್ಲೇಖವಾಗಿರುವುದರಿಂದ ವೈಯಕ್ತಿಕ ವ್ಯವಹಾರಕ್ಕೂ ಪುತ್ತಿಲ ಪರಿವಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಒತ್ತಾಯದಂತೆ ಪಕ್ಷೇತರರಾಗಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರು ಸ್ಪರ್ಧಿಸಿದರು.ಚುನಾವಣೆಯ ಸಂದರ್ಭ ಕೇವಲ 20 ದಿನದಲ್ಲಿ ನಡೆದ ಪ್ರಚಾರ ಕಾರ್ಯದಲ್ಲಿ ತಾಲೂಕು, ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾವಿರಾರು ಕಾರ್ಯಕರ್ತರು ದುಡಿದಿರುವವರಲ್ಲಿ ನೇರಳಕಟ್ಟೆಯ ರಾಜಶೇಖರ್ ಕೋಟ್ಯಾನ್ ಕೂಡ ಒಬ್ಬರು.

ಇದೀಗ ಸಾಮಾಜಿಕ ಜಾಲತಾಣದಲ್ಲಿ ರಾಜಶೇಖರ್ ಕೋಟ್ಯಾನ್ ವಿರುದ್ಧ ಕೆಲವು ಆರೋಪಗಳು ಕೇಳಿ ಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ವಿಷಯ ಕರ್ನಾಟಕದ ಹಗರಿಬೊಮ್ಮನಹಳ್ಳಿಯ ಕ್ಷೇತ್ರದ ರಾಷ್ಟ್ರೀಯ ಪಕ್ಷದ ಟಿಕೇಟ್ ವಿಷಯದಲ್ಲಿ ನಾಯಕರ ನಡುವೆ ಚುನಾವಣ ಪೂರ್ವ ವ್ಯವಹಾರವಾಗಿದ್ದು, ಆ ಆರೋಪದಲ್ಲಿ ಪುತ್ತಿಲ ಪರಿವಾರದ ಹೆಸರು ಪ್ರಸ್ತಾಪವಾಗಿರುವುದರಿಂದ ಈ ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಬಂದ ದೂರಿನ ಪ್ರತಿಯಲ್ಲಿಯೂ ಪುತ್ತಿಲ ಪರಿವಾರದ ಬಗ್ಗೆ ಉಲ್ಲೇಖವಿಲ್ಲ. ಅವರ ವೈಯಕ್ತಿಕ ವ್ಯವಹಾರಕ್ಕೂ  ಪುತ್ತಿಲ ಪರಿವಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪುತ್ತಿಲ ಪರಿವಾರ ಸ್ಪಷ್ಟನೆ ನೀಡಿದೆ.

ಚುನಾವಣಾ ಪೂರ್ವದಲ್ಲಿ ನಡೆದಿರುವ ಈ ಘಟನೆಯ ಬಗ್ಗೆ ಯಾವುದೇ ಪೊಲೀಸ್‌ ದೂರು ದಾಖಲಾಗಿಲ್ಲ, ಹೀಗಿದ್ದರೂ ಮಾಧ್ಯಮಗಳಲ್ಲಿ ಪ್ರಚಾರ ಮಾಡುವುದು ಸರಿಯಲ್ಲ ಎಂದು ಬೆಂಗಳೂರಿನ ಉದ್ಯಮಿ ಸ್ಪಷ್ಟನೆ ನೀಡಿದ್ದಾರೆ.

ಈ ನಡುವೆ ರಾಜಶೇಖರ ಕೋಟ್ಯಾನ್‌ ಅವರು ಕೂಡಾ ಪೊಲೀಸ್‌ ಠಾಣೆಗೆ ದೂರು ನೀಡಿ, ತೇಜೋವಧೆ ಮಾಡಲಾಗುತ್ತಿದೆ, ಯಾವುದೇ ದೂರು ದಾಖಲಾಗಿದ್ದರೂ ಉದ್ದೇಶಪೂರ್ವಕವಾಗಿ ತೇಜೋವಧೆ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Advertisement

 

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ
January 10, 2026
10:30 PM
by: ರೂರಲ್‌ ಮಿರರ್ ಸುದ್ದಿಜಾಲ
ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ
January 10, 2026
10:28 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror