ಪುತ್ತೂರು : ಫೇಸ್ ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನ ನಿಂದಿಸಿ ಕಂಮೆಟ್ ಮಾಡಿದ ಆರೋಪದ ಮೇಲೆ ಶಾಸಕರ ಅಭಿಮಾನಿಗಳು ರಾತ್ರೋ ರಾತ್ರಿ ಯುವಕನ ಮನೆಗೆ ಹೋಗಿ ಗೂಂಡಾಗಿರಿ ನಡೆಸಿದ ಘಟನೆ ನಡೆದಿದೆ.
ಈ ಸಂದರ್ಭ ಮಾತಿಗೆ ಮಾತು ಬೆಳೆದು ಎರಡು ತಂಡಗಳ ನಡುವೆ ವಾಗ್ವಾದ ನಡೆದಿದೆ. ಮಾಹಿತಿ ಪಡೆದ ಸುಳ್ಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.ಸ್ಥಳಕ್ಕೆ ಡಿವೈಎಸ್ಪಿ ಗಾನ ಕುಮಾರ್ ಆಗಮಿಸಿ ಎರಡು ತಂಡದವರನ್ನ ಸಮಾಧಾನಪಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ಪಡೆದರು.ಆದರೆ ಅಶೋಕ್ ರೈ ಅಭಿಮಾನಿ ಬಳಗ ಪ್ರಮೀತ್ ಕ್ಷಮೆಯಾಚಿಸುಂತೆ ಪಟ್ಟು ಹಿಡಿದಿದ್ದು, ಕೊನೇ ಕ್ಷಣದಲ್ಲಿ ಪ್ರಮೀತ್ ಅಶೋಕ್ ರೈ ಬಗ್ಗೆ ನಿಂದನೆ ಮಾಡಿದ್ದಕ್ಕೆ ಕ್ಷಮೆಯಾಚನೆ ಮಾಡಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel