ವೈಜ್ಞಾನಿಕ ಮಣ್ಣಿನ ವಿಶ್ಲೇಷಣೆಯ ಮೂಲಕ ಉತ್ತಮ ಬೆಳೆ ಇಳುವರಿಯನ್ನು ಸಾಧಿಸಲು ರೈತರಿಗೆ ಬೆಂಬಲ ನೀಡುವ ಉದ್ದೇಶದಿಂದ ಕ್ಯಾಂಪ್ಕೊ ಪುತ್ತೂರು ಶಾಖೆಯಲ್ಲಿ ಮಣ್ಣಿನ ಪರೀಕ್ಷಾ ಘಟಕವನ್ನು ಪ್ರಾರಂಭಿಸಲಾಗಿದೆ ಎಂದು ಕ್ಯಾಂಪ್ಕೊ ಪ್ರಕಟಣೆ ತಿಳಿಸಿದೆ…..ಮುಂದೆ ಓದಿ….
ಮಣ್ಣು ಪರೀಕ್ಷಾ ಯಂತ್ರವು ಮಣ್ಣಿನಲ್ಲಿರುವ 12 ಪ್ರಮುಖ ಪೋಷಕಾಂಶಗಳನ್ನು ವಿಶ್ಲೇಷಿಸುವ ಜೊತೆಗೆ ಪೋಷಕಾಂಶಗಳ ನಿರ್ವಹಣೆಗೆ ಸಂಕ್ಷಿಪ್ತ ಶಿಫಾರಸುಗಳನ್ನು ನೀಡುತ್ತದೆ. ರೈತರು ಮಣ್ಣಿನ ಪೋಷಕಾಂಶಗಳ ಸ್ಥಿತಿಯನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ನಿಖರವಾದ ಮಣ್ಣಿನ ಪರೀಕ್ಷೆಯ ಮೂಲಕ ಸಮತೋಲಿತ ಪೋಷಕಾಂಶಗಳ ನಿರ್ವಹಣೆ ಮಾಡುವುದು ಅತ್ಯಗತ್ಯ. ಈ ಉತ್ತಮವಾದ ಸೇವೆಯನ್ನು ಕ್ಯಾಂಪ್ಕೊ ಸದಸ್ಯರುಗಳೆಲ್ಲ ಸದುಪಯೋಗ ಮಾಡಿಕೊಳ್ಳಬೇಕಾಗಿ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿಯವರು ಮನವಿ ಮಾಡಿರುತ್ತಾರೆ.
ಮಣ್ಣಿನ ಪರೀಕ್ಷೆ ಯಂತ್ರದ ಉದ್ಘಾಟನೆಯನ್ನು ಪ್ರ ಗತಿಪರ ಕೃಷಿಕ ಸುರೇಶ್ ಬಲ್ನಾಡು ನೆರವೇರಿಸಿದರು. ಕ್ಯಾಂಪ್ಕೊ ಅಧ್ಯಕ್ಷ , ಕಿಶೋರ್ ಕುಮಾರ್ ಕೊಡ್ಗಿ, ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ವಿ.ಸತ್ಯನಾರಾಯಣ, ನಿರ್ದೇಶಕ ರಾಘವೇಂದ್ರ ಭಟ್, ಎ.ಆರ್.ಡಿ.ಎಫ್ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೇಶವ ಭಟ್, ಕ್ಯಾಂಪ್ಕೊ ಸದಸ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಭಾರತದ ರಾಸಾಯನಿಕ ವಲಯವು ಒಟ್ಟು ದೇಶೀಯ ಉತ್ಪನ್ನ ಕೊಡುಗೆಯಲ್ಲಿ ಗಮನಾರ್ಹ ಪಾತ್ರ ವಹಿಸುತ್ತಿದೆ.…
ರಾಯರ ಪರಮಭಕ್ತರದ ಜ್ಯೋತಿಷಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ 9535156490
ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ ಜಮ್ಮು ಮತ್ತು ಕಾಶ್ಮೀರದ…
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…
ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಸ್ಥಗಿತವಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗರದಲ್ಲಿ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ…