ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಪುತ್ತೂರು ನಗರದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಫೆಬ್ರವರಿ 21ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕೆ.ಇ.ಜಯರಾಮ್ ತಿಳಿಸಿದ್ದಾರೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಈ ಉದ್ಯೋಗ ಮೇಳ ನಡೆಯಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಈ ಉದ್ಯೋಗ ಮೇಳದಲ್ಲಿ ಖಾಸಗಿ ಹಾಗೂ ವಿವಿಧ ಕ್ಷೇತ್ರಗಳ ಹೆಸರಾಂತ ಕಂಪನಿಗಳು ಮತ್ತು ಉದ್ಯೋಗದಾತರು ಭಾಗವಹಿಸುವ ನಿರೀಕ್ಷೆ ಇದ್ದು, ವಿದ್ಯಾರ್ಹತೆ ಹೊಂದಿರುವ ಯುವಕ–ಯುವತಿಯರಿಗೆ ನೇರ ಸಂದರ್ಶನ (spot interview) ಮೂಲಕ ಉದ್ಯೋಗ ಪಡೆಯುವ ಅವಕಾಶ ಕಲ್ಪಿಸಲಾಗುತ್ತದೆ. ಈ ಮೇಳದಲ್ಲಿ 80 ಕ್ಕೂ ಅಧಿಕ ಕಂಪೆನಿಗಳು ಸೇರಿದಂತೆ 150 ಕ್ಕೂ ಅಧಿಕ ಉದ್ಯಮ ಪ್ರತಿನಿಧಿಗಳು ಭಾಗವಹಿಸಲಿವೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯ, ದೀನ್‌ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇದರ ಆಶ್ರಯದಲ್ಲಿ ಉದ್ಯೋಗ ಮೇಳ ಏರ್ಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…