ಪಟ್ಟೆಯಲ್ಲಿ ಶ್ರೀಕೃಷ್ಣಲೀಲೆ – 2025 | ಅಭಿನಂದನಾ ಕಾರ್ಯಕ್ರಮ

August 24, 2025
2:50 PM

ಪುತ್ತೂರಿನ ದ್ವಾರಕಾ ಪ್ರತಿಷ್ಠಾನ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣಲೀಲೆ 2025 ರ ಅಭಿನಂನಂದನಾ ಕಾರ್ಯಕ್ರಮ ಶಾಲಾ ಆವರಣದಲ್ಲಿ ನಡೆಯಿತು.

Advertisement
Advertisement

ವಿಜೃಂಭಣೆಯಿಂದ ನಡೆದ ಶ್ರೀಕೃಷ್ಣ ಲೀಲೆ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಈ ಸಭೆಯಲ್ಲಿ ಕೃತಜ್ಞತೆಯನ್ನು ಸಲ್ಲಿಸಲಾಯಿತು. ಎಸ್ ಕೆ ಫ್ರೆಂಡ್ಸ್ ಮುಡಿಪಿನಡ್ಕ, ಶ್ರೀಕೃಷ್ಣ ಯುವಕಮಂಡಲ ಪಟ್ಟೆ, ಶ್ರೀಕೃಷ್ಣ ಹಿರಿಯ ವಿದ್ಯಾರ್ಥಿ ಸಂಘ ಪಟ್ಟೆ, ಶ್ರೀಕೃಷ್ಣ ಭಜನಾ ಮಂಡಳಿ ಮುಡಿಪಿನಡ್ಕ, ಅಯ್ಯಪ್ಪ ಭಜನಾ ಮಂಡಳಿ ಪೆರಿಗೇರಿ ಹಾಗೂ ನವಚೈತನ್ಯ ಯುವಕಮಂಡಲ ಪೆರಿಗೇರಿ ಇದರ ಪದಾದಿಕಾರಿಗಳು ಹಾಗೂ ಸದಸ್ಯರು ಸಭೆಯಲ್ಲಿ ಭಾಗವಹಿಸಿದರು.

ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಮಾತನಾಡಿ, ಶಾಲೆಯ ಮೇಲೆ ಅಭಿಮಾನವಿಟ್ಟು ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟ ಎಲ್ಲಾ ಸಂಘದ ಪದಾಧಿಕಾರಿಗಳು, ಸ್ವಯಂಸೇವಕರು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಮತ್ತು ಸಮಾಜ ಬಾಂಧವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಎಲ್ಲರಿಗೂ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಪರವಾಗಿ ನೆನಪಿನ ಕಾಣಿಕೆಯನ್ನು ನೀಡಲಾಯಿತು.

ಸಂಸ್ಥೆಯ ಸಂಚಾಲಕರಾದ ವಿಘ್ನೇಶ್ ಹಿರಣ್ಯ ಇವರು ಸ್ವಾಗತಿಸಿ, ಮುಖ್ಯಗುರುಗಳಾದ  ಸುಮನಾ ಬಿ ವಂದಿಸಿದರು. ಪೋಷಕ ವಿದ್ಯಾ ಸಂಸ್ಥೆಗಳ ಪೋಷಕ ಮಂಡಳಿಯ ಅಧ್ಯಕ್ಷರುಗಳಾದ ಲಿಂಗಪ್ಪ ಗೌಡ ಮೂಡಿಕೆ,  ಕೇಶವ ಪ್ರಸಾದ್ ನೀಲಗಿರಿ,  ಸತೀಶ್ ಕೊಪ್ಪಳ, ನಿವೃತ್ತ ಯೋಧರಾದ  ಸುಬ್ಬಪ್ಪ ಪಾಟಾಳಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ  ಅನೂಪ್, ಮುಖ್ಯಗುರುಗಳಾದ ರಾಜಗೋಪಾಲ ಎನ್, ಶಾಲಾ ಶಿಕ್ಷಕವೃಂದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
January 30, 2026
7:27 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror