ಪುತ್ತೂರಿನ ದ್ವಾರಕಾ ಪ್ರತಿಷ್ಠಾನ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣಲೀಲೆ 2025 ರ ಅಭಿನಂನಂದನಾ ಕಾರ್ಯಕ್ರಮ ಶಾಲಾ ಆವರಣದಲ್ಲಿ ನಡೆಯಿತು.
ವಿಜೃಂಭಣೆಯಿಂದ ನಡೆದ ಶ್ರೀಕೃಷ್ಣ ಲೀಲೆ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಈ ಸಭೆಯಲ್ಲಿ ಕೃತಜ್ಞತೆಯನ್ನು ಸಲ್ಲಿಸಲಾಯಿತು. ಎಸ್ ಕೆ ಫ್ರೆಂಡ್ಸ್ ಮುಡಿಪಿನಡ್ಕ, ಶ್ರೀಕೃಷ್ಣ ಯುವಕಮಂಡಲ ಪಟ್ಟೆ, ಶ್ರೀಕೃಷ್ಣ ಹಿರಿಯ ವಿದ್ಯಾರ್ಥಿ ಸಂಘ ಪಟ್ಟೆ, ಶ್ರೀಕೃಷ್ಣ ಭಜನಾ ಮಂಡಳಿ ಮುಡಿಪಿನಡ್ಕ, ಅಯ್ಯಪ್ಪ ಭಜನಾ ಮಂಡಳಿ ಪೆರಿಗೇರಿ ಹಾಗೂ ನವಚೈತನ್ಯ ಯುವಕಮಂಡಲ ಪೆರಿಗೇರಿ ಇದರ ಪದಾದಿಕಾರಿಗಳು ಹಾಗೂ ಸದಸ್ಯರು ಸಭೆಯಲ್ಲಿ ಭಾಗವಹಿಸಿದರು.
ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಮಾತನಾಡಿ, ಶಾಲೆಯ ಮೇಲೆ ಅಭಿಮಾನವಿಟ್ಟು ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟ ಎಲ್ಲಾ ಸಂಘದ ಪದಾಧಿಕಾರಿಗಳು, ಸ್ವಯಂಸೇವಕರು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಮತ್ತು ಸಮಾಜ ಬಾಂಧವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಎಲ್ಲರಿಗೂ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಪರವಾಗಿ ನೆನಪಿನ ಕಾಣಿಕೆಯನ್ನು ನೀಡಲಾಯಿತು.
ಸಂಸ್ಥೆಯ ಸಂಚಾಲಕರಾದ ವಿಘ್ನೇಶ್ ಹಿರಣ್ಯ ಇವರು ಸ್ವಾಗತಿಸಿ, ಮುಖ್ಯಗುರುಗಳಾದ ಸುಮನಾ ಬಿ ವಂದಿಸಿದರು. ಪೋಷಕ ವಿದ್ಯಾ ಸಂಸ್ಥೆಗಳ ಪೋಷಕ ಮಂಡಳಿಯ ಅಧ್ಯಕ್ಷರುಗಳಾದ ಲಿಂಗಪ್ಪ ಗೌಡ ಮೂಡಿಕೆ, ಕೇಶವ ಪ್ರಸಾದ್ ನೀಲಗಿರಿ, ಸತೀಶ್ ಕೊಪ್ಪಳ, ನಿವೃತ್ತ ಯೋಧರಾದ ಸುಬ್ಬಪ್ಪ ಪಾಟಾಳಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅನೂಪ್, ಮುಖ್ಯಗುರುಗಳಾದ ರಾಜಗೋಪಾಲ ಎನ್, ಶಾಲಾ ಶಿಕ್ಷಕವೃಂದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…