ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಅವರ ಅಭಿಮಾನಿಗಳ ಆಶಯವಾಗಿತ್ತು. ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ.
Advertisement
ಕಾರ್ಯಕರ್ತರ ಒತ್ತಾಯದ ಮೇರೆಗೆ ಹಾಗೂ ಹಿಂದುತ್ವದ ಧ್ವನಿಯನ್ನು ಮತ್ತೆ ಮುನ್ನಲೆಗೆ ತರಲು, ಕಾರ್ಯಕರ್ತರ ಭಾವನೆಗೆ ಬೆಲೆ ನೀಡಿ ಅವರ ಪರವಾಗಿ ಕೆಲಸ ನಿರ್ವಹಿಸಲು ಅರುಣ್ ಕುಮಾರ್ ಪುತ್ತಿಲರವರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ.
Advertisement
ಪಕ್ಷೇತರವಾಗಿ ಸ್ಪರ್ಧಿಸಲಿರುವ ಪುತ್ತಿಲರವರು ಎ.17 ಸೋಮವಾರದಂದು ನಾಮಪತ್ರ ಸಲ್ಲಿಸಲಿದ್ದಾರೆ.
Advertisement
ಎ.17 ರಂದು ಬೆಳಿಗ್ಗೆ ಪುತ್ತೂರು ಮಹಾತೋಭಾರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ, ಬೆಳಿಗ್ಗೆ 10ಕ್ಕೆ ಪುತ್ತೂರಿನ ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದವರೆಗೆ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement