Advertisement
Election MIRROR

ಚುನಾವಣಾ ಕಣ | ಪುತ್ತೂರಿನಲ್ಲಿ ಮತ್ತೆ ತ್ರಿಕೋನ ಸ್ಫರ್ಧೆ | ಟ್ರೆಂಡ್‌ ಆಗುತ್ತಿದೆ ಪುತ್ತೂರಿಗೆ ಪುತ್ತಿಲ | ಬ್ಯಾಟ್‌ ಹಿಡಿದ ಪಕ್ಷೇತರ ಅಭ್ಯರ್ಥಿ..! |

Share

ಪುತ್ತೂರು ವಿಧಾನ ಸಭಾ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಹೈವೋಲ್ಟೇಜ್‌ ಕ್ಷೇತ್ರವಾಗಿದೆ.ನಾಮಪತ್ರ ಹಿಂತೆಗೆಯುವ ಸಮಯ ಕಳೆದಿದೆ. ಈಗ ತ್ರಿಕೋನ ಸ್ಪರ್ಧೆಯಲ್ಲಿರುವ ಕ್ಷೇತ್ರದಲ್ಲಿ ಗೆಲುವಿನ ಬಗ್ಗೆ ಚರ್ಚೆಯಾಗುತ್ತಿದೆ. ಪುತ್ತೂರಿಗೆ ಪುತ್ತಿಲ ಮತ್ತೊಮ್ಮೆ ಟ್ರೆಂಡ್‌ ಆಗಿದೆ. ಬ್ಯಾಟ್‌ ಚಿಹ್ನೆಯ ಮೂಲಕ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಪುತ್ತೂರಿಗೆ ಪುತ್ತಿಲ ಎಂದು  ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಸದ್ದು ಮಾಡುತ್ತಿದ್ದಾರೆ.

ಅರುಣ್‌ ಕುಮಾರ್‌ ಪುತ್ತಿಲ ಅವರು ಹಿಂದುತ್ವದ ಆಧಾರದಲ್ಲಿಯೇ ಕಣದಲ್ಲಿದ್ದಾರೆ. ಯಾರ ವಿರುದ್ಧ ಸ್ಫರ್ಧೆ ಎನ್ನುವುದಕ್ಕಿಂತಲೂ ಹಿಂದುತ್ವದ ಪರವಾದ ಸ್ಫರ್ಧೆ ಇದು, ನಾಮಪತ್ರ ಹಿಂತೆಗೆದು ಮತ್ತೆ ಕಾರ್ಯಕರ್ತರ ಭಾವನೆಗೆ ನಾನೂ ನೋವು ನೀಡಲಾರೆ ಎಂದು ಸ್ಪಷ್ಟಪಡಿಸಿದ್ದರು.  ಎಂದು ಅರುಣ್‌ ಕುಮಾರ್‌ ಪುತ್ತಿಲ ಸ್ಫಷ್ಟಪಡಿಸಿದ್ದಾರೆ. ಈ ನಡುವೆಯೇ ಕಣದಲ್ಲಿ ಸಾಕಷ್ಟು ಪ್ರಚಾರ ನಡೆಯುತ್ತಿದೆ. ಪ್ರಚಾರದಲ್ಲಿ ಪುತ್ತಿಲ ಅವರ ಅಭಿಮಾನಿಗಳು, ಹಿಂದೂ ಕಾರ್ಯಕರ್ತರು ಮುಂದಿದ್ದಾರೆ. ಪುತ್ತಿಲ ಬೆಂಬಲಿತರು  ಪುತ್ತಿಲ ಪರ ಪ್ರಚಾರಕ್ಕೆ ಮುಂದಾಗಿದ್ದಾರೆ.  ಹಲವು ಯುವಕರ ಮೊಬೈಲ್ ಹಿಂದೆ, ವಾಹನಗಳಲ್ಲಿ, ಎಲ್ಲೆಂದರಲ್ಲಿ  ಅರುಣ್ ಪುತ್ತಿಲ ಸ್ಟಿಕ್ಕರ್ ಶುರುವಾಗಿದೆ. ಹಿಂದುತ್ವದ ಗೆಲವು ಆಗಲೇಬೇಕು ಎಂಬ ಸದ್ದಿಲ್ಲದ ಅಭಿಯಾನ ಆರಂಭವಾಗಿದೆ. ಅನೇಕ ಫೋಟೊಗಳು, ಅಭಿಯಾನಗಳು ಸೋಶಿಯಲ್‌ ಮೀಡಿಯಾದಲ್ಲಿ ಟ್ರೆಂಡ್‌ ಆಗುತ್ತಿದೆ.

ಈ ಎಲ್ಲದರ ನಡುವೆಯೇ ಪ್ರಚಾರ, ಅಪಪ್ರಚಾರಗಳೂ ಕಣದಲ್ಲಿ ಜೋರಾಗಿದೆ ಅಭಿವೃದ್ಧಿ ಬಗ್ಗೆ ಚರ್ಚೆ ಕಡಿಮೆಯಾಗಿದೆ. ಅರುಣ್‌ ಕುಮಾರ್‌ ಪುತ್ತಿಲ ಅವರು ಹಲವಾರು ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಯೋಜನೆ ಹಾಕಿಕೊಂಡು, ಮುಂದೆ ಈ ಅಪಪ್ರಚಾರಗಳನ್ನು ನಿರ್ಲಕ್ಷಿಸಿ ಹಿಂದುತ್ವದ ಗೆಲುವಿಗೆ ಪಣ ತೊಡುತ್ತೇವೆ ಎಂದು ಹೇಳಿದ್ದಾರೆ.  ಈಗಾಗಲೇ ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ಅಡಿಕೆ ಕೃಷಿಕರ, ಸಾಮಾಜಿಕ ಕಾಳಜಿ ಇರುವ ಕೃಷಿಕರಿಗೂ ದೂರವಾಣಿ ಮೂಲಕ ಮಾತುಕತೆ ನಡೆಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಕೃಷಿಕರು ಬರೆದುಕೊಂಡಿದ್ದಾರೆ.

ಬಿಜೆಪಿಯಿಂದ ಆಶಾ ತಿಮ್ಮಪ್ಪ, ಕಾಂಗ್ರೆಸ್‌ನಿಂದ ಅಶೋಕ್ ಕುಮಾರ್ ರೈ ಸ್ಪರ್ಧೆ ಮಾಡುತ್ತಿದ್ದಾರೆ. ‌ ಈವರ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಈ ನಡುವೆಯೇ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಪುತ್ತೂರಿನಲ್ಲಿ ಇತಿಹಾಸ ಸೃಷ್ಟಿಸಲು ಪಣ ತೊಟ್ಟಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

15 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

15 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

1 day ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

1 day ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

1 day ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

1 day ago