ಪುತ್ತೂರು ತಾಲೂಕು ಪತ್ರಕರ್ತರ ಸಂಘ | ನೂತನ ಪದಾಧಿಕಾರಿಗಳ ಆಯ್ಕೆ |

November 20, 2022
1:14 PM

ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಭೆ ಪುತ್ತೂರು ಪತ್ರಿಕಾಭವನದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ಅಧ್ಯಕ್ಷರಾಗಿ ಹೊಸದಿಗಂತ ಪತ್ರಿಕೆಯ ಐ.ಬಿ.ಸಂದೀಪ್ ಕುಮಾರ್, ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕದ ಕುಮಾರ್ ಕಲ್ಲಾರೆ, ಕಾರ್ಯದರ್ಶಿಯಾಗಿ ನ್ಯೂಸ್ 18 ಕನ್ನಡ ವರದಿಗಾರ ಅಜಿತ್ ಕುಮಾರ್, ಜತೆ ಕಾರ್ಯದರ್ಶಿಯಾಗಿ ಹೊಸದಿಗಂತ ಪತ್ರಿಕೆಯ ರಾಜೇಶ್ ಪಟ್ಟೆ, ಖಜಾಂಚಿಯಾಗಿ ದೈಜಿ ವರ್ಲ್ಡ್ ಚಾನಲ್ ವರದಿಗಾರ ಕೃಷ್ಣಪ್ರಸಾದ್ ಬಲ್ನಾಡು ಅವರನ್ನು ಆಯ್ಕೆ ಮಾಡಲಾಯಿತು.

ಹಲವು ಸಮಯಗಳಿಂದ ಅತಂತ್ರವಾಗಿದ್ದ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡುವಂತೆ ಸದಸ್ಯರ ಸಭೆಯಲ್ಲಿ ಒತ್ತಾಯ ನಡೆಯಿತು. ಈ ಹಿನ್ನಲೆಯಲ್ಲಿ ಪುತ್ತೂರು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಸಂಘದ ಕಾನೂನು ಸಲಹೆಗಾರರಾಗಿ ಖ್ಯಾತ ನ್ಯಾಯವಾದಿಗಳಾದ ನರಸಿಂಹ ಪ್ರಸಾದ್ ಅವರನ್ನು ಆಯ್ಕೆ ಮಾಡಲಾಯಿತು. ಪತ್ರಿಕಾ ಕಛೇರಿಯ ಮೆನೇಜರ್ ಆಗಿ ವಿ ಫೋರ್ ವರದಿಗಾರ ಪ್ರವೀಣ್ ಕುಮಾರ್ ಬೊಳುವಾರು ಅವರನ್ನು ಮುಂದುವರಿಸಲು ತೀರ್ಮಾನಿಸಲಾಯಿತು.

ಪುತ್ತೂರು ತಾಲೂಕು ಪತ್ರಕರ್ತರ ಸಂಘವು ತಾಲೂಕಿನ ಪತ್ರಕರ್ತರ ಹಿತರಕ್ಷಣೆಗೆ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಬಿಡಿಸುದ್ದಿ ವರದಿಗಾರರು, ಡಿಜಿಟಲ್‌ ಮೀಡಿಯಾದ ವರದಿಗಾರರನ್ನು, ಸಂಪಾದಕರನ್ನು ಕೂಡಾ ಸಂಘಕ್ಕೆ ಸೇರಿಸಿಕೊಳ್ಳುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎಂದು ನೂತನ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror