ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಭೆ ಪುತ್ತೂರು ಪತ್ರಿಕಾಭವನದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ಅಧ್ಯಕ್ಷರಾಗಿ ಹೊಸದಿಗಂತ ಪತ್ರಿಕೆಯ ಐ.ಬಿ.ಸಂದೀಪ್ ಕುಮಾರ್, ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕದ ಕುಮಾರ್ ಕಲ್ಲಾರೆ, ಕಾರ್ಯದರ್ಶಿಯಾಗಿ ನ್ಯೂಸ್ 18 ಕನ್ನಡ ವರದಿಗಾರ ಅಜಿತ್ ಕುಮಾರ್, ಜತೆ ಕಾರ್ಯದರ್ಶಿಯಾಗಿ ಹೊಸದಿಗಂತ ಪತ್ರಿಕೆಯ ರಾಜೇಶ್ ಪಟ್ಟೆ, ಖಜಾಂಚಿಯಾಗಿ ದೈಜಿ ವರ್ಲ್ಡ್ ಚಾನಲ್ ವರದಿಗಾರ ಕೃಷ್ಣಪ್ರಸಾದ್ ಬಲ್ನಾಡು ಅವರನ್ನು ಆಯ್ಕೆ ಮಾಡಲಾಯಿತು.
ಹಲವು ಸಮಯಗಳಿಂದ ಅತಂತ್ರವಾಗಿದ್ದ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡುವಂತೆ ಸದಸ್ಯರ ಸಭೆಯಲ್ಲಿ ಒತ್ತಾಯ ನಡೆಯಿತು. ಈ ಹಿನ್ನಲೆಯಲ್ಲಿ ಪುತ್ತೂರು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಸಂಘದ ಕಾನೂನು ಸಲಹೆಗಾರರಾಗಿ ಖ್ಯಾತ ನ್ಯಾಯವಾದಿಗಳಾದ ನರಸಿಂಹ ಪ್ರಸಾದ್ ಅವರನ್ನು ಆಯ್ಕೆ ಮಾಡಲಾಯಿತು. ಪತ್ರಿಕಾ ಕಛೇರಿಯ ಮೆನೇಜರ್ ಆಗಿ ವಿ ಫೋರ್ ವರದಿಗಾರ ಪ್ರವೀಣ್ ಕುಮಾರ್ ಬೊಳುವಾರು ಅವರನ್ನು ಮುಂದುವರಿಸಲು ತೀರ್ಮಾನಿಸಲಾಯಿತು.
ಪುತ್ತೂರು ತಾಲೂಕು ಪತ್ರಕರ್ತರ ಸಂಘವು ತಾಲೂಕಿನ ಪತ್ರಕರ್ತರ ಹಿತರಕ್ಷಣೆಗೆ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಬಿಡಿಸುದ್ದಿ ವರದಿಗಾರರು, ಡಿಜಿಟಲ್ ಮೀಡಿಯಾದ ವರದಿಗಾರರನ್ನು, ಸಂಪಾದಕರನ್ನು ಕೂಡಾ ಸಂಘಕ್ಕೆ ಸೇರಿಸಿಕೊಳ್ಳುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎಂದು ನೂತನ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…