ಪುತ್ತೂರಿಗೆ ಮೆಡಿಕಲ್‌ ಕಾಲೇಜು ಸ್ಥಾಪನೆಗೆ ಒತ್ತಾಯ | ನಗರದಲ್ಲಿ ಕಾಲ್ನಡಿಗೆ ಜಾಥಾ |

Advertisement

ಪುತ್ತೂರಿಗೆ ಸುಸಜ್ಜಿತವಾದ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಪುತ್ತೂರುಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ ಸೋಮವಾರ ಪುತ್ತೂರಿನ ದರ್ಬೆಯಿಂದ ಬೊಳುವಾರುವರೆಗೆ ನಡೆಯಿತು.

Advertisement

ಪುತ್ತೂರಿನಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳನ್ನು ಚಿಕಿತ್ಸೆಗಾಗಿ ಮಂಗಳೂರು ಸೇರಿದಂತೆ ವಿವಿಧ ಕಡೆಗಳಿಗೆ ಸಾಗಿಸಬೇಕಾದ ಸ್ಥಿತಿ ಇದೆ. ಇದರಿಂದ ಬಡವರಿಗೆ ಸಂಕಷ್ಟವಾಗುತ್ತಿದೆ. ಈ ಕಾರಣಕ್ಕಾಗಿ ಪುತ್ತೂರಿನಲ್ಲಿ ಮೆಡಿಕಲ್‌ ಕಾಲೇಜು ಸ್ಥಾಪನೆಯಾಗಬೇಕು, ಈ ಮೂಲಕ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಬೇಕು ಎಂದು ಆಗ್ರಹಿಸಿ ಹೋರಾಟ ನಡೆಯುತ್ತಿದೆ. ಇದರ ಅಂಗವಾಗಿ ಸೋಮವಾರ ಪುತ್ತೂರು ನಗರದಲ್ಲಿ ಕಾಲ್ನಡಿಗೆ ಜಾಥಾ ನಡೆಯಿತು.

Advertisement
Advertisement

Advertisement

Advertisement

ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಮತ್ತು ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ  ದರ್ಬೆಯಲ್ಲಿ ಜಾಥಾಕ್ಕೆ ಚಾಲನೆ ನೀಡಿದರು. ಉಪಾಧ್ಯಕ್ಷರಾದ ಝೇವಿಯರ್ ಡಿ’ಸೋಜಾ, ಎ ರೂಪೇಶ್ ರೈ , ವಿಶ್ವಪ್ರಸಾದ್ ಸೇಡಿಯಾಪು, ಕಾರ್ಯಕಾರಿ ಸಮಿತಿ ಸದಸ್ಯರಾದ ಎಚ್.ಮಹಮ್ಮದ್ ಆಲಿ, ಮೌರಿಸ್ ಮಸ್ಕರೇನ್ಹಸ್, ಬಾಲಕೃಷ್ಣ ಗೌಡ ಕೆಮ್ಮಾರ, ಅಮಳ ರಾಮಚಂದ್ರ, ಡಾ.ಬಿ.ಕೆ.ವಿಷುಕುಮಾರ್, ರಾಜ್ಯ ದಾರಿಮಿ ಒಕ್ಕೂಟದ ಅಧ್ಯಕ್ಷ ಎಸ್.ಬಿ.ದಾರಿಮಿ, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜಾನ್ ಕುಟ್ಹೀನೊ, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಪೈ, ಸುಭಾಷ್ ರೈ ಬೆಳ್ಳಿಪ್ಪಾಡಿ, ಚಿಲ್ಮೆತ್ತಾರು ಸಂತೋಷ್, ನಗರಸಭೆ ಮಾಜಿ ಅಧ್ಯಕ್ಷೆ ಜಯಂತಿ ನಾಯಕ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಹೋರಾಟ ಸಮಿತಿ ಸಂಚಾಲಕ ಲಕ್ಷ್ಮೀಶ ಗಬ್ಲಡ್ಕ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement

 

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಪುತ್ತೂರಿಗೆ ಮೆಡಿಕಲ್‌ ಕಾಲೇಜು ಸ್ಥಾಪನೆಗೆ ಒತ್ತಾಯ | ನಗರದಲ್ಲಿ ಕಾಲ್ನಡಿಗೆ ಜಾಥಾ |"

Leave a comment

Your email address will not be published.


*