ಪುತ್ತೂರಿಗೆ ಸುಸಜ್ಜಿತವಾದ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಪುತ್ತೂರುಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ ಸೋಮವಾರ ಪುತ್ತೂರಿನ ದರ್ಬೆಯಿಂದ ಬೊಳುವಾರುವರೆಗೆ ನಡೆಯಿತು.
ಪುತ್ತೂರಿನಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳನ್ನು ಚಿಕಿತ್ಸೆಗಾಗಿ ಮಂಗಳೂರು ಸೇರಿದಂತೆ ವಿವಿಧ ಕಡೆಗಳಿಗೆ ಸಾಗಿಸಬೇಕಾದ ಸ್ಥಿತಿ ಇದೆ. ಇದರಿಂದ ಬಡವರಿಗೆ ಸಂಕಷ್ಟವಾಗುತ್ತಿದೆ. ಈ ಕಾರಣಕ್ಕಾಗಿ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕು, ಈ ಮೂಲಕ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಬೇಕು ಎಂದು ಆಗ್ರಹಿಸಿ ಹೋರಾಟ ನಡೆಯುತ್ತಿದೆ. ಇದರ ಅಂಗವಾಗಿ ಸೋಮವಾರ ಪುತ್ತೂರು ನಗರದಲ್ಲಿ ಕಾಲ್ನಡಿಗೆ ಜಾಥಾ ನಡೆಯಿತು.
ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಮತ್ತು ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ ದರ್ಬೆಯಲ್ಲಿ ಜಾಥಾಕ್ಕೆ ಚಾಲನೆ ನೀಡಿದರು. ಉಪಾಧ್ಯಕ್ಷರಾದ ಝೇವಿಯರ್ ಡಿ’ಸೋಜಾ, ಎ ರೂಪೇಶ್ ರೈ , ವಿಶ್ವಪ್ರಸಾದ್ ಸೇಡಿಯಾಪು, ಕಾರ್ಯಕಾರಿ ಸಮಿತಿ ಸದಸ್ಯರಾದ ಎಚ್.ಮಹಮ್ಮದ್ ಆಲಿ, ಮೌರಿಸ್ ಮಸ್ಕರೇನ್ಹಸ್, ಬಾಲಕೃಷ್ಣ ಗೌಡ ಕೆಮ್ಮಾರ, ಅಮಳ ರಾಮಚಂದ್ರ, ಡಾ.ಬಿ.ಕೆ.ವಿಷುಕುಮಾರ್, ರಾಜ್ಯ ದಾರಿಮಿ ಒಕ್ಕೂಟದ ಅಧ್ಯಕ್ಷ ಎಸ್.ಬಿ.ದಾರಿಮಿ, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜಾನ್ ಕುಟ್ಹೀನೊ, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಪೈ, ಸುಭಾಷ್ ರೈ ಬೆಳ್ಳಿಪ್ಪಾಡಿ, ಚಿಲ್ಮೆತ್ತಾರು ಸಂತೋಷ್, ನಗರಸಭೆ ಮಾಜಿ ಅಧ್ಯಕ್ಷೆ ಜಯಂತಿ ನಾಯಕ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಹೋರಾಟ ಸಮಿತಿ ಸಂಚಾಲಕ ಲಕ್ಷ್ಮೀಶ ಗಬ್ಲಡ್ಕ ಕಾರ್ಯಕ್ರಮ ನಿರ್ವಹಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…