ಅಡಿಕೆ‌ ಹಳದಿ ರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ | ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

July 5, 2024
2:46 PM
ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಸರಿಯಾದ ಕ್ರಮಗಳು ಅಗತ್ಯವಿದೆ. ಕೃಷಿಕರಿಗೆ ಬದುಕಿಗೆ ಧೈರ್ಯ ತುಂಬುವ ಕೆಲಸ ನಡೆಸಬೇಕಿದೆ ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

ಸುಳ್ಯ ಹಾಗೂ ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಡಿಕೆಗೆ ಹಳದಿ ಇದೆ ಯಾವುದೇ ಔಷಧಿ ಸಿಂಪಡಣೆ ಮಾಡಿದರೂ ರೋಗ ಕಡಿಮೆಯಾಗಿಲ್ಲ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳದೇ ಇದ್ದಲ್ಲಿ ಎರಡು ತಾಲೂಕಿನ ಕೃಷಿಕರ ಬದುಕು ಸಂಕಷ್ಟವಾಗಲಿದೆ ಎಂದು ಶಾಸಕ ಅಶೋಕ್ ರೈಯವರು ಕೆಡಿಪಿ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆದರು.

Advertisement
Advertisement

ಅಡಿಕೆ ಕೊಳೆರೋಗ ಅಥವಾ ಹಳದಿ ರೋಗ ಬಂದರೆ ಕೃಷಿಕರಿಗೆ ಪರಿಹಾರ ಕೊಟ್ಟರೆ ಸಾಲದು, ಇದಕ್ಕೆ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬುದರ ಬಗ್ಗೆ ಗಂಭೀರ ಆಲೋಚನೆ ಮಾಡಬೇಕಿದೆ. ಸಾವಿರಾರು ಕೃಷಿಕರು ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿದ್ದಾರೆ. ಬೆಳೆ ವಿಮೆಯಲ್ಲಿ ಪರಿಹಾರ ಸರಕಾರ ಕೊಟ್ಟರೆ ಏನೂ ಸಾಲದು. ಜೀವನವೇ ಅಡಿಕೆ ಆಗಿರುವಾಗ ಪರಿಹಾರ ಎಷ್ಟು ಕೊಡಬೇಕಿದೆ? ವಿಜ್ಞಾನಿಗಳನ್ನು ಕರೆಸಿ ಈ ಬಗ್ಗೆ ಸಂಶೋಧನೆ ನಡೆಸಿ ಅದಕ್ಕೊಂದು ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಈ ಬಗ್ಗೆ ನಾನು ಸಿಪಿಸಿಆರ್ ಐ ವಿಜ್ಞಾನಿಗಳ ಜೊತೆ ಮಾತನಾಡಿದ್ದೇನೆ, ಸರಕಾರ ಇದಕ್ಕೆ ವಿಶೇಷ ಅನುದಾನವನ್ನು‌ಮೀಸಲಿಡುವ ಮೂಲಕ ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಕೃಷಿಕರಿಗೆ ಬದುಕು ನೀಡಬೇಕಿದೆ. ಈಗಾಗಲೇ ಸುಳ್ಯ ತಾಲೂಕಿನ ಆರ್ಧ ಭಾಗ ಹಾಗೂ ಪುತ್ತೂರು ತಾಲೂಕಿನ ಒಂದೆರಡು ಗ್ರಾಮದಲ್ಲಿ ರೋಗ ಕಠಣಿಸಿಕೊಂಡಿದೆ ಎಂದು‌ಶಾಸಕರು‌ಸಭೆಯ ಗಮನಕ್ಕೆ ತಂದರು.

Advertisement

ಈ ಬಗ್ಗೆ ಸರಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚೆ ನಡೆಸುವುದಾಗಿ ಸಚಿವರು ಭರವಸೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಹಜ ಬೇಸಾಯ ಅನುಷ್ಠಾನ, ಚಾಮರಾಜನಗರ ಜಿಲ್ಲೆಯ ರೈತರಿಗೊಂದು ವರದಾನ
July 8, 2024
12:14 PM
by: The Rural Mirror ಸುದ್ದಿಜಾಲ
ನಿಮ್ಮ ಕನಸಿನ ಕೃಷಿ ಭೂಮಿಯ ವಿನ್ಯಾಸ ಮಾಡುವ ಇಚ್ಚೆ ಇದೆಯೇ..? ಫಾರ್ಮ್ ವಿನ್ಯಾಸದ ಉದ್ದೇಶವೇನು?
July 8, 2024
12:03 PM
by: The Rural Mirror ಸುದ್ದಿಜಾಲ
ರಾಜ್ಯದ ಕರಾವಳಿ, ಮಾಲೆನಾಡಿನಲ್ಲಿ ಮಳೆ, ಪ್ರವಾಹ, ಭೂಕುಸಿತ – ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರ ಹುಚ್ಚಾಟ : ರಾಜ್ಯದ ಡ್ಯಾಂಗಳ ನೀರಿನ ಲೆಕ್ಕ ಏನು?
July 8, 2024
11:32 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 8-7-2024 | ರಾಜ್ಯದ ಬಹುತೇಕ ಕಡೆ ಮಳೆ | ಜು.9 ರಿಂದ ಎರಡು ದಿನಗಳ ಕಾಲ ಮಳೆ ಕಡಿಮೆ ನಿರೀಕ್ಷೆ |
July 8, 2024
11:03 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror