ಅಡಿಕೆ‌ ಹಳದಿ ರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ | ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

July 5, 2024
2:46 PM
ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಸರಿಯಾದ ಕ್ರಮಗಳು ಅಗತ್ಯವಿದೆ. ಕೃಷಿಕರಿಗೆ ಬದುಕಿಗೆ ಧೈರ್ಯ ತುಂಬುವ ಕೆಲಸ ನಡೆಸಬೇಕಿದೆ ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

ಸುಳ್ಯ ಹಾಗೂ ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಡಿಕೆಗೆ ಹಳದಿ ಇದೆ ಯಾವುದೇ ಔಷಧಿ ಸಿಂಪಡಣೆ ಮಾಡಿದರೂ ರೋಗ ಕಡಿಮೆಯಾಗಿಲ್ಲ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳದೇ ಇದ್ದಲ್ಲಿ ಎರಡು ತಾಲೂಕಿನ ಕೃಷಿಕರ ಬದುಕು ಸಂಕಷ್ಟವಾಗಲಿದೆ ಎಂದು ಶಾಸಕ ಅಶೋಕ್ ರೈಯವರು ಕೆಡಿಪಿ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆದರು.

ಅಡಿಕೆ ಕೊಳೆರೋಗ ಅಥವಾ ಹಳದಿ ರೋಗ ಬಂದರೆ ಕೃಷಿಕರಿಗೆ ಪರಿಹಾರ ಕೊಟ್ಟರೆ ಸಾಲದು, ಇದಕ್ಕೆ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬುದರ ಬಗ್ಗೆ ಗಂಭೀರ ಆಲೋಚನೆ ಮಾಡಬೇಕಿದೆ. ಸಾವಿರಾರು ಕೃಷಿಕರು ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿದ್ದಾರೆ. ಬೆಳೆ ವಿಮೆಯಲ್ಲಿ ಪರಿಹಾರ ಸರಕಾರ ಕೊಟ್ಟರೆ ಏನೂ ಸಾಲದು. ಜೀವನವೇ ಅಡಿಕೆ ಆಗಿರುವಾಗ ಪರಿಹಾರ ಎಷ್ಟು ಕೊಡಬೇಕಿದೆ? ವಿಜ್ಞಾನಿಗಳನ್ನು ಕರೆಸಿ ಈ ಬಗ್ಗೆ ಸಂಶೋಧನೆ ನಡೆಸಿ ಅದಕ್ಕೊಂದು ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಈ ಬಗ್ಗೆ ನಾನು ಸಿಪಿಸಿಆರ್ ಐ ವಿಜ್ಞಾನಿಗಳ ಜೊತೆ ಮಾತನಾಡಿದ್ದೇನೆ, ಸರಕಾರ ಇದಕ್ಕೆ ವಿಶೇಷ ಅನುದಾನವನ್ನು‌ಮೀಸಲಿಡುವ ಮೂಲಕ ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಕೃಷಿಕರಿಗೆ ಬದುಕು ನೀಡಬೇಕಿದೆ. ಈಗಾಗಲೇ ಸುಳ್ಯ ತಾಲೂಕಿನ ಆರ್ಧ ಭಾಗ ಹಾಗೂ ಪುತ್ತೂರು ತಾಲೂಕಿನ ಒಂದೆರಡು ಗ್ರಾಮದಲ್ಲಿ ರೋಗ ಕಠಣಿಸಿಕೊಂಡಿದೆ ಎಂದು‌ಶಾಸಕರು‌ಸಭೆಯ ಗಮನಕ್ಕೆ ತಂದರು.

ಈ ಬಗ್ಗೆ ಸರಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚೆ ನಡೆಸುವುದಾಗಿ ಸಚಿವರು ಭರವಸೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?
June 6, 2026
1:37 PM
by: ಸಾಯಿಶೇಖರ್ ಕರಿಕಳ
ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್
ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ
June 5, 2026
10:04 PM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror