ಸುಳ್ಯ ಹಾಗೂ ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಡಿಕೆಗೆ ಹಳದಿ ಇದೆ ಯಾವುದೇ ಔಷಧಿ ಸಿಂಪಡಣೆ ಮಾಡಿದರೂ ರೋಗ ಕಡಿಮೆಯಾಗಿಲ್ಲ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳದೇ ಇದ್ದಲ್ಲಿ ಎರಡು ತಾಲೂಕಿನ ಕೃಷಿಕರ ಬದುಕು ಸಂಕಷ್ಟವಾಗಲಿದೆ ಎಂದು ಶಾಸಕ ಅಶೋಕ್ ರೈಯವರು ಕೆಡಿಪಿ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆದರು.
ಅಡಿಕೆ ಕೊಳೆರೋಗ ಅಥವಾ ಹಳದಿ ರೋಗ ಬಂದರೆ ಕೃಷಿಕರಿಗೆ ಪರಿಹಾರ ಕೊಟ್ಟರೆ ಸಾಲದು, ಇದಕ್ಕೆ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬುದರ ಬಗ್ಗೆ ಗಂಭೀರ ಆಲೋಚನೆ ಮಾಡಬೇಕಿದೆ. ಸಾವಿರಾರು ಕೃಷಿಕರು ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿದ್ದಾರೆ. ಬೆಳೆ ವಿಮೆಯಲ್ಲಿ ಪರಿಹಾರ ಸರಕಾರ ಕೊಟ್ಟರೆ ಏನೂ ಸಾಲದು. ಜೀವನವೇ ಅಡಿಕೆ ಆಗಿರುವಾಗ ಪರಿಹಾರ ಎಷ್ಟು ಕೊಡಬೇಕಿದೆ? ವಿಜ್ಞಾನಿಗಳನ್ನು ಕರೆಸಿ ಈ ಬಗ್ಗೆ ಸಂಶೋಧನೆ ನಡೆಸಿ ಅದಕ್ಕೊಂದು ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಈ ಬಗ್ಗೆ ನಾನು ಸಿಪಿಸಿಆರ್ ಐ ವಿಜ್ಞಾನಿಗಳ ಜೊತೆ ಮಾತನಾಡಿದ್ದೇನೆ, ಸರಕಾರ ಇದಕ್ಕೆ ವಿಶೇಷ ಅನುದಾನವನ್ನುಮೀಸಲಿಡುವ ಮೂಲಕ ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಕೃಷಿಕರಿಗೆ ಬದುಕು ನೀಡಬೇಕಿದೆ. ಈಗಾಗಲೇ ಸುಳ್ಯ ತಾಲೂಕಿನ ಆರ್ಧ ಭಾಗ ಹಾಗೂ ಪುತ್ತೂರು ತಾಲೂಕಿನ ಒಂದೆರಡು ಗ್ರಾಮದಲ್ಲಿ ರೋಗ ಕಠಣಿಸಿಕೊಂಡಿದೆ ಎಂದುಶಾಸಕರುಸಭೆಯ ಗಮನಕ್ಕೆ ತಂದರು.
ಈ ಬಗ್ಗೆ ಸರಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚೆ ನಡೆಸುವುದಾಗಿ ಸಚಿವರು ಭರವಸೆ ನೀಡಿದರು.
ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ…
ಬದುಕಿನ ಯಾನಕ್ಕೆ ಪಾಲಕರು ರೇಖೆಯನ್ನು ಎಳೆದು ತೋರಿಸುತ್ತಾರೆ. ಅದು ಭವಿಷ್ಯದ ಕೈತಾಂಗು. ರಕ್ಷಣೆ…
ಹನುಮಸಾಗರ ಗ್ರಾಮದ ಏಳು ವರ್ಷದ ಪ್ರದ್ವಿಕಾ ಕಣ್ಣಿಗೆ ಬಟ್ಟೆ ಕಟ್ಟಿ6 ನಿಮಿಷದಲ್ಲಿ 112…
ಸಾರ್ವಜನಿಕರಲ್ಲಿ ಮಲೇರಿಯಾ ಕಾಯಿಲೆ ಕುರಿತು ಅರಿವು ಮೂಡಿಸಬೇಕೆಂಬುವುದು ಜಾಥದ ಪ್ರಮುಖ ಉದ್ದೇಶವಾಗಿದೆ. ಪ್ರತಿಯೊಬ್ಬರೂ…
ಜಾಗತಿಕರಣದ ಆಕ್ರಮಣದಿಂದ ಜನಸಮುದಾಯಗಳ ಪಾರಂಪರಿಕ ಕಲೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಲು ಪರಿಣಾಮಕಾರಿ ಪ್ರಯತ್ನ…