ಕರಾವಳಿ ಹಾಗೂ ಮಲೆನಾಡು ಭಾಗದ ಅದರಲ್ಲೂ ಪುತ್ತೂರಿನ ಪ್ರಮುಖ ವಾಣಿಜ್ಯ ಬೆಳೆ , ಆರ್ಥಿಕ ಬೆಳೆ ಅಡಿಕೆ. ಈಗ ಅಡಿಕೆ ಬೆಲೆ ಕುಸಿತವಾಗುತ್ತಿದೆ. ಕೇಂದ್ರ ಸರ್ಕಾರ ತಕ್ಷಣವೇ ಆಮದು ನೀತಿಯನ್ನು ಬದಲು ಮಾಡಬೇಕು. ಆಮದು ಅಡಿಕೆಯನ್ನು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಒತ್ತಾಯಿಸಿದ್ದಾರೆ.
ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಕುಮಾರ್ ರೈ,ಅಡಿಕೆ ಧಾರಣೆ ಕಳೆದ ಕೆಲವು ದಿನಗಳಿಂದ ಕುಸಿತವಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ಅಡಿಕೆ ಆಮದು ಎಂಬುದ ಅಡಿಕೆ ವಲಯದ ಮಾಹಿತಿ. ಹೀಗಾಗಿ ಕೇಂದ್ರ ಸರ್ಕಾರವು ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ತೊಂದರೆಯಾಗುತ್ತಿದೆ. ಇದೇ ರೀತಿ ಅಡಿಕೆ ಆಮದು ಆದರೆ ಅಡಿಕೆ ದರ 300 ರೂಪಾಯಿಗೆ ಕುಸಿತವಾಗುವ ಭೀತಿ ಇದೆ. ಹೀಗಾದರೆ ಕೃಷಿಕರಿಗೆ ಸಂಕಷ್ಟವಾಗಲಿದೆ. ಇದಕ್ಕಾಗಿ ತಕ್ಷಣವೇ ಕ್ರಮ ಆಗಬೇಕು ಎಂದು ಒತ್ತಾಯಿಸಿದ ಅಶೋಕ್ ಕುಮಾರ್ ರೈ, ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಆಮದು ನಿಲ್ಲಿಸಲು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುತ್ತಿದೆ. ಇಲ್ಲದೇ ಇದ್ದರೆ ರೈತರೆಲ್ಲೂ ಸೇರಿ ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು, ಇಲ್ಲಿಯ ರೈತರು ಅಡಿಕೆಯನ್ನೇ ಅಲವಂಬಿಸಿದ್ದಾರೆ ಎಂದು ಅಶೋಕ್ ಕುಮಾರ್ ರೈ ಹೇಳಿದರು. ಸದ್ಯವೇ ದೆಹಲಿಗೆ ಭೇಟಿ ನೀಡಿ ನಿರ್ಮಲಾ ಸೀತಾರಾಮ್ ಅವರನ್ನು ಭೇಟಿಯಾಗಿದೆ ಅಡಿಕೆ ಆಮದು ಕಡಿವಾಣಕ್ಕೆ ಒತ್ತಾಯಿಸಲಾಗುವುದು ಎಂದು ಅಶೋಕ್ ಕುಮಾರ್ ರೈ ಹೇಳಿದರು.
ಈಗಾಗಲೇ ಅಡಿಕೆ ಬೆಳೆಗಾರರು ಹಳದಿ ಎಲೆರೋಗ, ಎಲೆಚುಕ್ಕಿ ರೋಗದಿಂದ ಕಂಗಾಲಾಗಿದ್ದಾರೆ. ಪಾಣಾಜೆ ಪ್ರದೇಶದಲ್ಲೂ ಹಳದಿ ಎಲೆರೋಗ ಇರುವ ಬಗ್ಗೆ ಮಾಹಿತಿ ಇದೆ. ಇದಕ್ಕಾಗಿ ತೋಟಗಾರಿಕಾ ಇಲಾಖಾ ಅಧಿಕಾರಿಗಳಿಗೆ, ಸಿಪಿಸಿಆರ್ ಐ ವಿಜ್ಞಾನಿಗಳಿಗೆ ಮಾಹಿತಿ ನೀಡಲಾಗಿದೆ ಎಂದರು.
ಅಡಿಕೆ ಬೆಳೆಗಾರರಿಗೆ ಬೆಳೆವಿಮೆ ತೀರಾ ಪ್ರಯೋಜನವಾಗಿದೆ. ಕೆಲವರು ಇದು ಕೇಂದ್ರ ಸರ್ಕಾರದ ಕೊಡುಗೆ ಎಂದು ಹೇಳಿದ್ದಾರೆ.ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರದ ಪಾಲು, ರೈತರ ಪಾಲೂ ಇದೆ. ಕೇಂದ್ರ ಸರ್ಕಾರ ಮಾತ್ರವೇ ಬೆಳೆ ವಿಮೆ ನೀಡುವುದಲ್ಲ. ಕೇಂದ್ರ ಸರ್ಕಾರ ಮಾತ್ರವೇ ಬೆಳೆವಿಮೆ ನೀಡುವುದಾದರೆ ಪಕ್ಕದ ಕೇರಳ ರಾಜ್ಯದ ಅಡಿಕೆ ಬೆಳೆಗಾರರಿಗೆ ಏಕೆ ಸಿಗುತ್ತಿಲ್ಲ ಎಂದು ಅಶೋಕ್ ಕುಮಾರ್ ರೈ ಪ್ರಶ್ನಿಸಿದರು.
Arecanut prices now falling. The central government should immediately change the import policy. Puttur MLA Ashok Kumar Rai has demanded that appropriate action should be taken to prevent the import of Arecanut.
ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…
₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್ 18 ಪ್ರೊ ಖರೀದಿಗಾಗಿ ದೇಶದ ಹಲವು…
ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…