ಯಾವುದೇ ಒಬ್ಬ ವ್ಯಕ್ತಿ ತಪ್ಪು ಮಾಡಿದ್ದಲ್ಲಿ ಆತನನ್ನು ಮನಬಂದಂತೆ ಶಿಕ್ಷಿಸುವ ಅಧಿಕಾರ ಪೊಲೀಸರಿಗೆ ಇರುವುದಿಲ್ಲ. ಬದಲಾಗಿ, ಇಲಾಖೆ ಸಂವಿಧಾನ ಹಾಗೂ ನ್ಯಾಯಲಯ ನಿರ್ದೇಶಿಸಿದ ರೀತಿಯಲ್ಲಿ ಶಿಕ್ಷೆಯನ್ನು ನೀಡಬೇಕೇ ಹೊರತು ಈ ರೀತಿ ಅಮಾನೀಯವಾಗಿ ದಬ್ಬಾಳಿಕೆಯನ್ನು ನಡೆಸುವುದು ಸರಿಯಲ್ಲ. ಬಡ ಯುವಕರ ಮೇಲೆ ದೌರ್ಜನ್ಯ ಎಸಗಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಸರಕಾರ ಹಾಗೂ ಜಿಲ್ಲಾಡಳಿತ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರುವಿನ ಶ್ರೀ ಶ್ರೀ ಈಶವಿಠಲದಾಸ ಸ್ವಾಮೀಜಿ ತಿಳಿಸಿದ್ದಾರೆ.
ದೌರ್ಜನ್ಯ ಎಸಗಿದ ಅಧಿಕಾರಗಳು ಮತ್ತು ಸಿಬ್ಬಂದಿಗಳ ಮೇಲೆ ಯಾವುದೇ ಕ್ರಮವನ್ನು ಸರಕಾರ ತೆಗೆದುಕೊಳ್ಳದಿದ್ದರೆ ಜಿಲ್ಲೆಯಲ್ಲಿರುವ ಎಲ್ಲಾ ಹಿಂದೂ ಸಂಘಟನೆಗಳನ್ನು ಒಟ್ಟುಗೂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆಯನ್ನು ಸ್ವಾಮೀಜಿಯವರು ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel