ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ.
ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ ಮನೆ ನಿರ್ಮಾಣ ಹಾಗೂ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದರು.
ಅಲ್ಲದೇ ಪ್ರವೀಣ್ ನೆಟ್ಟಾರ್ ಪತ್ನಿಗೆ ಸರ್ಕಾರದ ವತಿಯಿಂದ ಕೆಲಸ ಕೊಡಬೇಕು ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದಿತ್ತು. ಬಿಜೆಪಿ ಮತ್ತು ಹಿಂದುತ್ವ ಪರ ಕಾರ್ಯಕರ್ತರು ಈ ಬಗ್ಗೆ ಅಭಿಯಾನವನ್ನೂ ನಡೆಸಿದ್ದರು. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿ ಕಚೇರಿಯಲ್ಲೇ ವಿಶೇಷ ನೇಮಕಾತಿ ನಡೆಸಿ 2022ರ ಸೆ.22ರಂದು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದರು.
ಇದೀಗ ಹೊಸ ಸರ್ಕಾರ ಬಸವರಾಜ ಬೊಮ್ಮಾಯಿ ಸರ್ಕಾರದ ತಾತ್ಕಾಲಿಕ ನೆಲೆಯ ನೇಮಕಾತಿಯನ್ನು ರದ್ದುಗೊಳಿಸಿದ್ದು, ಪ್ರವೀಣ್ ನೆಟ್ಟಾರ್ ಪತ್ನಿ ನೂತನರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ.
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…