ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ.
ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ ಮನೆ ನಿರ್ಮಾಣ ಹಾಗೂ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದರು.
ಅಲ್ಲದೇ ಪ್ರವೀಣ್ ನೆಟ್ಟಾರ್ ಪತ್ನಿಗೆ ಸರ್ಕಾರದ ವತಿಯಿಂದ ಕೆಲಸ ಕೊಡಬೇಕು ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದಿತ್ತು. ಬಿಜೆಪಿ ಮತ್ತು ಹಿಂದುತ್ವ ಪರ ಕಾರ್ಯಕರ್ತರು ಈ ಬಗ್ಗೆ ಅಭಿಯಾನವನ್ನೂ ನಡೆಸಿದ್ದರು. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿ ಕಚೇರಿಯಲ್ಲೇ ವಿಶೇಷ ನೇಮಕಾತಿ ನಡೆಸಿ 2022ರ ಸೆ.22ರಂದು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದರು.
ಇದೀಗ ಹೊಸ ಸರ್ಕಾರ ಬಸವರಾಜ ಬೊಮ್ಮಾಯಿ ಸರ್ಕಾರದ ತಾತ್ಕಾಲಿಕ ನೆಲೆಯ ನೇಮಕಾತಿಯನ್ನು ರದ್ದುಗೊಳಿಸಿದ್ದು, ಪ್ರವೀಣ್ ನೆಟ್ಟಾರ್ ಪತ್ನಿ ನೂತನರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ.
ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗದಲ್ಲಿ ಪ್ರಭಾವ ಬೀರಿದ್ದ ಮುರಸು ಚಂಡಮಾರುತ ಉತ್ತರ ವಾಯವ್ಯ…
₹35 ಕೋಟಿ ಮೌಲ್ಯದ ಅಡಿಕೆ ಅಕ್ರಮ ಆಮದು ಮತ್ತು ಕಸ್ಟಮ್ಸ್ ಸುಂಕ ವಂಚನೆ…
ರಾಜ್ಯದ ಒಂದು ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳ ಜೊತೆ ಜೋಡಿಸುವ ಗುರಿಯನ್ನು…
ಕರಾವಳಿ ಮತ್ತು ಮಲೆನಾಡಿನಲ್ಲಿ ನವೆಂಬರ್ 8ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ…
ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ…
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ 13 ರೈತ ಗುಂಪುಗಳು ಪರಸ್ಪರರ ಹೊಲಗಳಲ್ಲಿ ಸರದಿಯಂತೆ ಕೆಲಸ…