ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಉಪ ಕೃಷಿ ನಿರ್ದೇಶಕರ ನೇತೃತ್ವದಲ್ಲಿ ನಾಲ್ಕು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಮತ್ತು ಕೃಷಿ ಅಧಿಕಾರಿಗಳ ತಂಡವನ್ನು ರಚಿಸಿ, ಜಿಲ್ಲೆಗೆ ವ್ಯಾಪ್ತಿಗೆ ಒಳಪಡುವ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಮಾರಾಟ ಮಳಿಗೆಗಳ ತಪಾಸಣೆ ಮಾಡಲಾಗುವುದು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಬಿ.ಜಿ ಕಲಾವತಿ ತಿಳಿಸಿದ್ದಾರೆ.
ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ನಕಲಿ ಎಂದು ತಿಳಿದು ಬಂದರೆ ಅಂತಹ ಕಳಪೆ ಗುಣಮಟ್ಟದ ವಸ್ತುಗಳನ್ನು ಖರೀದಿಸದಂತೆ ಜಾಗೃತಿ ಮೂಡಿಸುವ ಸಲುವಾಗಿ ರೈತರಿಗೆ ಸಲಹೆಯನ್ನು ನೀಡಲಾಗುವುದು. ದೇಸಿ ತಳಿಗಳನ್ನು ರಕ್ಷಿಸಿ ಮತ್ತು ಪರಂಪರೆ ಮುಂದುವರೆಸುತ್ತಿರುವ ರೈತರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಲು ಜೀವವೈವಿಧ್ಯತೆಯನ್ನು ಬೆಂಬಲಿಸಲು ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಪೋಷಿಸಲು ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…