ಪ್ಯಾನ್-ಡಿ ಮತ್ತು ಪ್ಯಾರಸಿಟಮಾಲ್ ಸೇರಿದಂತೆ 59 ಔಷಧಿಗಳು ಗುಣಮಟ್ಟದಿಂದ ಕೂಡಿಲ್ಲ…! | ಸ್ಯಾಂಪಲ್‌ ಪರೀಕ್ಷೆ ವೇಳೆ ಬಹಿರಂಗ |

September 26, 2024
3:07 PM

ಪ್ಯಾನ್-ಡಿ ಮತ್ತು ಪ್ಯಾರಸಿಟಮಾಲ್ ಸೇರಿದಂತೆ 59 ಔಷಧಿಗಳು ಗುಣಮಟ್ಟದಿಂದ ಕೂಡಿಲ್ಲ ಮತ್ತು ಅವುಗಳನ್ನು ಮಾರುಕಟ್ಟೆಯಿಂದ ತೆಗೆದುಹಾಕಬೇಕು ಎಂದು ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO)  ಹೇಳಿದೆ.

Advertisement
Advertisement

ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‌ಸಿಒ) ಕಳೆದ ತಿಂಗಳು ಗುಣಮಟ್ಟ ವಿಫಲವಾದ ಔಷಧ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಡುಗಡೆ ಮಾಡಿದ ವರದಿಯಲ್ಲಿ ಆಯುರ್ವೇದದ ಕೆಲವು ಔಷಧ ಸೇರಿದಂತೆ  59 ಔಷಧಿಗಳ ಬಗ್ಗೆ ಎಚ್ಚರಿಕೆ ಇರಲು ತಿಳಿಸಿದೆ. ಪರೀಕ್ಷೆಯ ಸಮಯದಲ್ಲಿ ಗುಣಮಟ್ಟ ಇಲ್ಲದಿರುವುದು ಕಂಡುಬಂದಿದೆ ಎಂದು ಹೇಳಿದೆ. ಆಗಸ್ಟ್‌ ನಲ್ಲಿ  ಪರೀಕ್ಷೆ ನಡೆಸಲಾಗಿತ್ತು. ಪ್ಯಾನ್-ಡಿ, ಪ್ಯಾರಸಿಟಮಾಲ್,  ರಕ್ತದೊತ್ತಡ (ಬಿಪಿ) ಔಷಧಿಗಳು, ಸಕ್ಕರೆ ನಿಯಂತ್ರಣ ಔಷಧಗಳು, ವಿಟಮಿನ್‌ಗಳು, ಕ್ಯಾಲ್ಸಿಯಂ ಪೂರಕಗಳು ಸೇರಿದಂತೆ ಇತರ ಔಷಧ ಸೇರಿದೆ.

ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ  ಪ್ರತಿ ತಿಂಗಳು ನಿಯಮಿತವಾಗಿ ಗುಣಮಟ್ಟದ ಪರೀಕ್ಷೆಗಳನ್ನು ನಡೆಸುತ್ತದೆ, ಈ ತಪಾಸಣೆಗಳ ಮೂಲಕ ದೇಶದ ವಿವಿಧ ಪ್ರದೇಶಗಳಿಂದ ಮಾದರಿಗಳನ್ನು ಸಂಗ್ರಹಿಸುತ್ತದೆ. ವಿಶಿಷ್ಟವಾಗಿ,
30,000 ರಿಂದ 40,000 ಮಾದರಿಗಳನ್ನು ಪರೀಕ್ಷಿಸಲಾಗುತ್ತದೆ. ಜುಲೈನಲ್ಲಿ ಒಟ್ಟು 70 ಔಷಧಗಳನ್ನು ಗುಣಮಟ್ಟದಿಂದ ಕೂಡಿಲ್ಲ ಎಂದು ಗುರುತಿಸಲಾಗಿದೆ. ಈ ಸಂಯೋಜನೆಗಳನ್ನು ಆಗಾಗ್ಗೆ ಜ್ವರ, ಶೀತಗಳು, ನೋವು ನಿವಾರಣೆಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ.

The CDSCO has alerted that 59 medicines, including Pan-D and paracetamol, are substandard and must be removed from the market.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
January 30, 2026
7:27 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror