ಪ್ಯಾನ್-ಡಿ ಮತ್ತು ಪ್ಯಾರಸಿಟಮಾಲ್ ಸೇರಿದಂತೆ 59 ಔಷಧಿಗಳು ಗುಣಮಟ್ಟದಿಂದ ಕೂಡಿಲ್ಲ ಮತ್ತು ಅವುಗಳನ್ನು ಮಾರುಕಟ್ಟೆಯಿಂದ ತೆಗೆದುಹಾಕಬೇಕು ಎಂದು ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಹೇಳಿದೆ.
ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‌ಸಿಒ) ಕಳೆದ ತಿಂಗಳು ಗುಣಮಟ್ಟ ವಿಫಲವಾದ ಔಷಧ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಡುಗಡೆ ಮಾಡಿದ ವರದಿಯಲ್ಲಿ ಆಯುರ್ವೇದದ ಕೆಲವು ಔಷಧ ಸೇರಿದಂತೆ 59 ಔಷಧಿಗಳ ಬಗ್ಗೆ ಎಚ್ಚರಿಕೆ ಇರಲು ತಿಳಿಸಿದೆ. ಪರೀಕ್ಷೆಯ ಸಮಯದಲ್ಲಿ ಗುಣಮಟ್ಟ ಇಲ್ಲದಿರುವುದು ಕಂಡುಬಂದಿದೆ ಎಂದು ಹೇಳಿದೆ. ಆಗಸ್ಟ್ ನಲ್ಲಿ ಪರೀಕ್ಷೆ ನಡೆಸಲಾಗಿತ್ತು. ಪ್ಯಾನ್-ಡಿ, ಪ್ಯಾರಸಿಟಮಾಲ್, ರಕ್ತದೊತ್ತಡ (ಬಿಪಿ) ಔಷಧಿಗಳು, ಸಕ್ಕರೆ ನಿಯಂತ್ರಣ ಔಷಧಗಳು, ವಿಟಮಿನ್‌ಗಳು, ಕ್ಯಾಲ್ಸಿಯಂ ಪೂರಕಗಳು ಸೇರಿದಂತೆ ಇತರ ಔಷಧ ಸೇರಿದೆ.
ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಪ್ರತಿ ತಿಂಗಳು ನಿಯಮಿತವಾಗಿ ಗುಣಮಟ್ಟದ ಪರೀಕ್ಷೆಗಳನ್ನು ನಡೆಸುತ್ತದೆ, ಈ ತಪಾಸಣೆಗಳ ಮೂಲಕ ದೇಶದ ವಿವಿಧ ಪ್ರದೇಶಗಳಿಂದ ಮಾದರಿಗಳನ್ನು ಸಂಗ್ರಹಿಸುತ್ತದೆ. ವಿಶಿಷ್ಟವಾಗಿ,
30,000 ರಿಂದ 40,000 ಮಾದರಿಗಳನ್ನು ಪರೀಕ್ಷಿಸಲಾಗುತ್ತದೆ. ಜುಲೈನಲ್ಲಿ ಒಟ್ಟು 70 ಔಷಧಗಳನ್ನು ಗುಣಮಟ್ಟದಿಂದ ಕೂಡಿಲ್ಲ ಎಂದು ಗುರುತಿಸಲಾಗಿದೆ. ಈ ಸಂಯೋಜನೆಗಳನ್ನು ಆಗಾಗ್ಗೆ ಜ್ವರ, ಶೀತಗಳು, ನೋವು ನಿವಾರಣೆಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ.
The CDSCO has alerted that 59 medicines, including Pan-D and paracetamol, are substandard and must be removed from the market.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…