ಹೊಸ ಆಹಾರ ಸಂಸ್ಕರಣೆ ಉದ್ಯಮ ಅಥವಾ ಕಿರು ಉದ್ಯಮಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ ಸಾಲ ಮಂಜೂರಾತಿಯನ್ನು ಬ್ಯಾಂಕುಗಳು ತ್ವರಿತವಾಗಿ ಮಾಡಲು ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚಿಸಿದ್ದಾರೆ.’
ಅವರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಬುಧವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ಒಂದು ದಿನದ ‘ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವೈಯಕ್ತಿಕ ಉದ್ದಿಮೆ, ಗೃಹ ಉತ್ಪಾದನೆ ಉತ್ಪಾದನೆ ಹಾಗೂ ಆಹಾರ ಸಂಸ್ಕರಣಾ ಉದ್ದಿಮೆ ಸೇರಿದಂತೆ ವಿವಿಧ ಕಿರು ಉದ್ಯಮಗಳಿಗೆ ನೆರವು ನೀಡಲು ಕೇಂದ್ರ ಸರಕಾರದ ಹಲವಾರು ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಆದರೆ ಬ್ಯಾಂಕುಗಳು ಸಾಲ ಮಂಜೂರಾತಿಗೆ ಸತಾಯಿಸುತ್ತಿರುವ ಸಾಕಷ್ಟು ಪ್ರಕರಣಗಳು ವರದಿಯಾಗುತ್ತಿವೆ. ಇದರಿಂದಲೇ ಯೋಜನೆಯ ಮೂಲ ಉದ್ದೇಶವೇ ಈಡೇರುವುದಿಲ್ಲ. ಈ ನಿಟ್ಟಿನಲ್ಲಿ ಬ್ಯಾಂಕುಗಳಲ್ಲಿ ಕಿರು ಆಹಾರ ಸಂಸ್ಕರಣೆ ಘಟಕಗಳ ಸಾಲ ಮಂಜೂರಾತಿ ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ನಡೆಸಬೇಕು ಎಂದು ಸಂಸದರು ಸೂಚಿಸಿದರು.
ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯು ಆತ್ಮನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ದೇಶಾದ್ಯಂತ ಈ ಯೋಜನೆಯಡಿ 2 ಲಕ್ಷ ಸಣ್ಣ ಉದ್ಯಮಶೀಲರನ್ನು ಹಣಕಾಸು ಬೆಂಬಲ ನೀಡುವ ಉದ್ದೇಶ ಇಟ್ಟುಕೊಳ್ಳಲಾಗಿದೆ ಎಂದು ಸಂಸದರು ತಿಳಿಸಿದರು.
ಕೃಷಿ ಜಂಟಿ ನಿರ್ದೇಶಕ ಹೊನ್ನಪ್ಪ ಗೌಡ ಮಾತನಾಡಿ ಈ ಯೋಜನೆಯಡಿ ಗರಿಷ್ಠ 15 ಲಕ್ಷದ ಸಬ್ಸಿಡಿ ದೊರಕಲಿದೆ. ಕೇಂದ್ರ ಸರಕಾರದ 35% ಹಾಗೂ ರಾಜ್ಯ ಸರ್ಕಾರದ 15 % ಪಾಲು ಇದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಜಂಟಿ ಕೈಗಾರಿಕಾ ನಿರ್ದೇಶಕ ಗೋಕುಲದಾಸ್, ಕೆಪೆಕ್ ಅಧಿಕಾರಿ ಅರವಿಂದ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕಿ ಕವಿತಾ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು. ಕೃಷಿ ಉಪನಿರ್ದೇಶಕರಾದ ಕುಮುದಾ ಸ್ವಾಗತಿಸಿ, ಉಪನಿರ್ದೇಶಕ ಶಿವಶಂಕರ್ ದಾನೇಗೊಂಡಲ್ ನಿರೂಪಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…