Advertisement
MIRROR FOCUS

ಕಿರು ಉದ್ದಿಮೆಗಳಿಗೆ ತ್ವರಿತ ಸಾಲ ಮಂಜೂರು – ಬ್ಯಾಂಕ್‍ಗಳಿಗೆ ದ ಕ ಸಂಸದರ ಸೂಚನೆ

Share

ಹೊಸ ಆಹಾರ ಸಂಸ್ಕರಣೆ ಉದ್ಯಮ ಅಥವಾ ಕಿರು ಉದ್ಯಮಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ ಸಾಲ ಮಂಜೂರಾತಿಯನ್ನು  ಬ್ಯಾಂಕುಗಳು ತ್ವರಿತವಾಗಿ ಮಾಡಲು ಲೋಕಸಭಾ  ಸದಸ್ಯ  ಕ್ಯಾಪ್ಟನ್  ಬ್ರಿಜೇಶ್ ಚೌಟ ಸೂಚಿಸಿದ್ದಾರೆ.’

ಅವರು  ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಬುಧವಾರ  ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ   ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ಒಂದು ದಿನದ ‘ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವೈಯಕ್ತಿಕ ಉದ್ದಿಮೆ, ಗೃಹ ಉತ್ಪಾದನೆ ಉತ್ಪಾದನೆ ಹಾಗೂ ಆಹಾರ ಸಂಸ್ಕರಣಾ  ಉದ್ದಿಮೆ  ಸೇರಿದಂತೆ ವಿವಿಧ ಕಿರು ಉದ್ಯಮಗಳಿಗೆ ನೆರವು ನೀಡಲು ಕೇಂದ್ರ ಸರಕಾರದ ಹಲವಾರು ಯೋಜನೆಗಳಿಗೆ  ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಆದರೆ ಬ್ಯಾಂಕುಗಳು ಸಾಲ ಮಂಜೂರಾತಿಗೆ  ಸತಾಯಿಸುತ್ತಿರುವ ಸಾಕಷ್ಟು ಪ್ರಕರಣಗಳು ವರದಿಯಾಗುತ್ತಿವೆ. ಇದರಿಂದಲೇ ಯೋಜನೆಯ ಮೂಲ ಉದ್ದೇಶವೇ ಈಡೇರುವುದಿಲ್ಲ. ಈ ನಿಟ್ಟಿನಲ್ಲಿ ಬ್ಯಾಂಕುಗಳಲ್ಲಿ ಕಿರು ಆಹಾರ ಸಂಸ್ಕರಣೆ ಘಟಕಗಳ ಸಾಲ ಮಂಜೂರಾತಿ ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ನಡೆಸಬೇಕು ಎಂದು ಸಂಸದರು ಸೂಚಿಸಿದರು.

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯು  ಆತ್ಮನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ  ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ದೇಶಾದ್ಯಂತ ಈ ಯೋಜನೆಯಡಿ 2 ಲಕ್ಷ ಸಣ್ಣ ಉದ್ಯಮಶೀಲರನ್ನು  ಹಣಕಾಸು ಬೆಂಬಲ ನೀಡುವ ಉದ್ದೇಶ ಇಟ್ಟುಕೊಳ್ಳಲಾಗಿದೆ ಎಂದು ಸಂಸದರು ತಿಳಿಸಿದರು.

ಕೃಷಿ ಜಂಟಿ ನಿರ್ದೇಶಕ ಹೊನ್ನಪ್ಪ ಗೌಡ ಮಾತನಾಡಿ ಈ ಯೋಜನೆಯಡಿ ಗರಿಷ್ಠ 15 ಲಕ್ಷದ ಸಬ್ಸಿಡಿ ದೊರಕಲಿದೆ. ಕೇಂದ್ರ ಸರಕಾರದ  35%  ಹಾಗೂ  ರಾಜ್ಯ ಸರ್ಕಾರದ 15 % ಪಾಲು ಇದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಜಂಟಿ ಕೈಗಾರಿಕಾ ನಿರ್ದೇಶಕ ಗೋಕುಲದಾಸ್, ಕೆಪೆಕ್ ಅಧಿಕಾರಿ  ಅರವಿಂದ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕಿ ಕವಿತಾ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು. ಕೃಷಿ ಉಪನಿರ್ದೇಶಕರಾದ  ಕುಮುದಾ ಸ್ವಾಗತಿಸಿ, ಉಪನಿರ್ದೇಶಕ ಶಿವಶಂಕರ್ ದಾನೇಗೊಂಡಲ್ ನಿರೂಪಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

19 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

1 day ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

1 day ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

1 day ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

1 day ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

1 day ago