ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಪತ್ತೆ ಹಾಗೂ ಅವುಗಳ ಚಲನವಲನದ ಮಾಹಿತಿ ಪಡೆಯಲು ರೇಡಿಯೋ ಕಾಲರ್ ಅಳವಡಿಕೆಗೆ ಅರಣ್ಯ ಇಲಾಖೆ ಮುಂದಾಗಿದೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕು ಬ್ಯಾದನೆ ಗ್ರಾಮದಲ್ಲಿ ಭುವನೇಶ್ವರಿ ಗುಂಪಿನ ಗಂಡಾನೆಗೆ ರೇಡಿಯೋ ಕಾಲರ್ ಅಳವಡಿಕೆ ಯಶಸ್ವಿಯಾಗಿದೆ. ಮೊದಲ ದಿನದ ಕಾರ್ಯಾಚರಣೆ ವಿಫಲವಾಗಿತ್ತು, ಬಳಿಕ ನಡೆದ ಕಾರ್ಯಾಚರಣೆಯಲ್ಲಿ ಏಳು ಕುಮ್ಕಿ ಕಾಡಾನೆಗಳನ್ನು ಬಳಸಿಕೊಂಡು ರೇಡಿಯೋ ಕಾಲರ್ ಅಳವಡಿಕೆ ಮಾಡಲಾಗಿದೆ. ಡಾ.ರಮೇಶ್ ನೇತೃತ್ವದ ತಂಡ ಕಾಡಾನೆಗೆ ಅರಿವಳಿಕೆ ಮದ್ದು ನೀಡಿದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಈಟಿಎಫ್ ಸಿಬ್ಬಂದಿ ಸಹಯೋಗದಲ್ಲಿ ರೇಡಿಯೋ ಕಾಲರ್ ಅಳವಡಿಸಲಾಯಿತು. ಸ್ಥಳೀಯರು, ಸಾರ್ವಜನಿಕರಿಗೆ ಕಾಡಾನೆಗಳ ಲೊಕೇಶನ್ ತಿಳಿಸಲು ರೇಡಿಯೋ ಕಾಲರ್ ಅಳವಡಿಕೆ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel