ಅಶೋಕೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ |

August 19, 2022
10:27 PM

ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ  ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಗುರುಕುಲ ಚಾತುರ್ಮಾಸ್ಯದಲ್ಲಿ ಶುಕ್ರವಾರ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.


ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿವಿ ಗುರುಕುಲದ ಮಕ್ಕಳಿಗೆ ಬಾಳೆಗೊನೆ ಸ್ಪರ್ಧೆ, ಮೊಸರು ಗಡಿಗೆ ಒಡೆಯುವುದು, ರಸಪ್ರಶ್ನೆ, ರಾಧಾ ಕೃಷ್ಣ ವೇಷ, ಮೊಸರು ಕಡೆಯುವುದು, ಹಗ್ಗ ಜಗ್ಗಾಟ ಮತ್ತಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗುರುಕುಲದ ವಿದ್ಯಾರ್ಥಿಗಳಿಂದ ಕೋಲಾಟ, ಸುಧೀರ್ ಹೆಗಡೆಯವರಿಂದ ಬಾನ್ಸುರಿ ವಾದನ ನಡೆದವು. ರಾತ್ರಿ ಧಾರ್ಮಿಕ ವಿಧಿವಿಧಾನಗಳು, ಶ್ರೀಕೃಷ್ಣನ ತೊಟ್ಟಿಲೋತ್ಸವ ಮತ್ತಿತರ ಕಾರ್ಯಕ್ರಮಗಳು ನಡೆದವು.
ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವ್ಯವಸ್ಥಾ ಪರಿಷತ್ ಅಧ್ಯಕ್ಷ ಡಿ.ಡಿ.ಶರ್ಮಾ, ವರಿಷ್ಠಾಚಾರ್ಯ ಸತ್ಯನಾರಾಯಣ ಶರ್ಮ, ಪ್ರಾಚಾರ್ಯ ಮಹೇಶ್ ಹೆಗಡೆ, ಉಪ ಪ್ರಾಚಾರ್ಯರಾದ ಸೌಭಾಗ್ಯ, ವಿಶ್ವೇಶ್ವರ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror