ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಗುರುಕುಲ ಚಾತುರ್ಮಾಸ್ಯದಲ್ಲಿ ಶುಕ್ರವಾರ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿವಿ ಗುರುಕುಲದ ಮಕ್ಕಳಿಗೆ ಬಾಳೆಗೊನೆ ಸ್ಪರ್ಧೆ, ಮೊಸರು ಗಡಿಗೆ ಒಡೆಯುವುದು, ರಸಪ್ರಶ್ನೆ, ರಾಧಾ ಕೃಷ್ಣ ವೇಷ, ಮೊಸರು ಕಡೆಯುವುದು, ಹಗ್ಗ ಜಗ್ಗಾಟ ಮತ್ತಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗುರುಕುಲದ ವಿದ್ಯಾರ್ಥಿಗಳಿಂದ ಕೋಲಾಟ, ಸುಧೀರ್ ಹೆಗಡೆಯವರಿಂದ ಬಾನ್ಸುರಿ ವಾದನ ನಡೆದವು. ರಾತ್ರಿ ಧಾರ್ಮಿಕ ವಿಧಿವಿಧಾನಗಳು, ಶ್ರೀಕೃಷ್ಣನ ತೊಟ್ಟಿಲೋತ್ಸವ ಮತ್ತಿತರ ಕಾರ್ಯಕ್ರಮಗಳು ನಡೆದವು.
ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವ್ಯವಸ್ಥಾ ಪರಿಷತ್ ಅಧ್ಯಕ್ಷ ಡಿ.ಡಿ.ಶರ್ಮಾ, ವರಿಷ್ಠಾಚಾರ್ಯ ಸತ್ಯನಾರಾಯಣ ಶರ್ಮ, ಪ್ರಾಚಾರ್ಯ ಮಹೇಶ್ ಹೆಗಡೆ, ಉಪ ಪ್ರಾಚಾರ್ಯರಾದ ಸೌಭಾಗ್ಯ, ವಿಶ್ವೇಶ್ವರ ಮತ್ತಿತರರು ಉಪಸ್ಥಿತರಿದ್ದರು.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…