ಗೋಕರ್ಣದಲ್ಲಿ ಯುವ ಸೇವಾ ಸಮಾವೇಶ | ನಮ್ಮಿಂದ ಸೇವೆ ಪಡೆದವರು ಕೂಡಾ ಸಂತುಷ್ಟರಾಗುವಂತಿರಬೇಕು – ರೋಹಿತ್‌ ಚಕ್ರತೀರ್ಥ |

August 21, 2022
7:24 PM

ನಮ್ಮಿಂದ ಸೇವೆ ಪಡೆದವರು ಕೂಡಾ ಸಂತುಷ್ಟರಾಗುವಂತಿರಬೇಕು. ತೋರಿಕೆಯ ಸೇವೆ ಬೇಡ; ಇದರಿಂದ ಯಾವ ಉಪಯೋಗವೂ ಇಲ್ಲ. ಜಗತ್ತಿನ ಎಲ್ಲರಿಗೂ ಸಲ್ಲುವ ಸೇವೆ ನಿಜವಾದ ಸೇವೆ ಎಂದು ಅಂಕಣಕಾರ ರೋಹಿತ್ ಚಕ್ರತೀರ್ಥ ಹೇಳಿದರು.

Advertisement
Advertisement
Advertisement
Advertisement

ಅವರು ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳು  ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಯುವ ಸೇವಾ ಸಮಾವೇಶದಲ್ಲಿ ಮಾತನಾಡಿದರು.

Advertisement

ಆರೆಸ್ಸೆಸ್ ಮುಖಂಡ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮಾತನಾಡಿ ಸಮೂಹದ ಪರಿಕಲ್ಪನೆ ಭಾರತದಲ್ಲಿ ಮಾತ್ರ ಇದೆ. ಕಾಮ, ಕ್ರೋಧ, ಲೋಭ ಇವು ಮೂರು ನರಕಕ್ಕೆ ದಾರಿ. ಇವುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇಡೀ ವಿಶ್ವದ ವಿಕಾಸಕ್ಕೆ ಭಾರತದ ಕೊಡುಗೆ ಅಪಾರ. ಇದನ್ನು ಅರ್ಥ ಮಾಡಿಕೊಂಡು ಭಾರತೀಯ ಯುವ ಪೀಳಿಗೆ ಭಾರತೀಯ ಸಂಸ್ಕೃತಿ ಪರಂಪರೆಯ ಬಗ್ಗೆ ಗೌರವ ಹೊಂದಿ ಅದನ್ನು ಪಾಲಿಸಬೇಕು ಎಂದು ಸಲಹೆ ಮಾಡಿದರು.

Advertisement

ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳು, ಸೇವೆಯಲ್ಲಿರುವ ಸಮಾಧಾನ, ಸಂತೋಷ ಭೋಗದಲ್ಲಿಲ್ಲ; ಯುವಶಕ್ತಿಯನ್ನು ಭೋಗದ ಜತೆ ಜೋಡಿಸದೇ, ಸೇವೆಯ ಜತೆ ಜೋಡಿಸುವ ಕಾರ್ಯ ಆಗಬೇಕು ಎಂದರು. ಯುವಶಕ್ತಿ ಮತ್ತು ಸೇವೆ ಇಂದಿನ ಸಮಾಜದಲ್ಲಿ ಅಪಮೌಲ್ಯವಾಗಿದೆ. ಪ್ರಕೃತಿಯ, ದೇಶದ, ಸಮಾಜದ ಮತ್ತು ನಮ್ಮಿಂದ ಶ್ರೇಷ್ಠರ ಸೇವೆ ಮಾಡುವ ಮೂಲಕ ನಮ್ಮ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು. ಸೇವೆ ಮಾಡದಿದ್ದರೆ ಬದುಕು ಪೂರ್ಣವಾಗುವುದಿಲ್ಲ. ದೇಶಕ್ಕೆ, ದೇವರಿಗೆ, ಸಮಾಜಕ್ಕೆ, ಗುರುಸ್ಥಾನಕ್ಕೆ ಸೇವೆ ಮಾಡುವ ಸಂಕಲ್ಪ ತೊಡಿ. ಸೇವೆ ಇಲ್ಲದಿದ್ದರೆ ಜೀವನ ವ್ಯರ್ಥ. ಯುವಕರೆಲ್ಲ ಸೇವಕರಾಗಬೇಕು; ಸೇವಕರೆಲ್ಲ ಯುವಕರಾಗಿಯೇ ಇರಬೇಕು. ಮುಪ್ಪಿಗೆ ಮದ್ದು ಸೇವೆ. ಸೇವೆಯಿಂದ ನಾವು ಶಾಶ್ವತರಾಗುತ್ತೇವೆ. ಮುಪ್ಪು- ಸಾವುಗಳಿಲ್ಲದ ಸ್ಥಿತಿಗೆ ಬರಲು ಸಾಧ್ಯ. ಸೇವೆಯ ಮೂಲಕ ನಾವು ಅಜರಾಮರ, ಅಮರರಾಗಬಹುದು ಎಂದು ಹೇಳಿದರು.

Advertisement

ಶ್ರೇಷ್ಠತೆಯೇ ಯುವಕನ ಲಕ್ಷಣ. ಸೇವೆ ಮತ್ತು ಸಾಧನೆಯಿಂದಷ್ಟೇ ಯುವ ಹುಮ್ಮಸ್ಸು ಬರಲು ಸಾಧ್ಯ. ನೈಸರ್ಗಿಕ ಬಲ ಉಳ್ಳವನು ಯುವಕ. ಬೀಜವು ಮಣ್ಣು, ಗಾಳಿ, ಬೆಳಕಿನ ಆಸರೆಯಿಂದ ವಿಕಾಸ ಹೊಂದಿ ವೃಕ್ಷವಾಗಿ ಫಲ ಬಿಡುತ್ತದೆ. ಮರ ಮತ್ತೆ ಆ ಫಲವನ್ನು ಮತ್ತೆ ಭೂಮಿಗೆ ನೀಡುತ್ತದೆ. ಹಾಗೆಯೇ ಯುವಕರ ಶಕ್ತಿ ಕೂಡಾ ದೇವರು, ಸಮಾಜ, ದೇಶದಿಂದ ಬರುವಂಥದ್ದು. ವೃಕ್ಷ ತನ್ನ ಫಲವನ್ನು ಮತ್ತೆ ಪ್ರಕೃತಿಗೆ ಅರ್ಪಿಸುವಂತೆ ಯುವ ಶಕ್ತಿ ಕೂಡಾ ತಾನು ಬೆಳೆಯಲು ಕಾರಣವಾದ ಸಮಾಜಕ್ಕೆ ಸಮರ್ಪಿಸಿಕೊಳ್ಳಬೇಕು ಎಂದು ಆಶಿಸಿದರು.

Advertisement

ಹವ್ಯಕ ಮಹಾಮಂಡಲ ಅಧ್ಯಕ್ಷ ಆರ್.ಎಸ್.ಹೆಗಡೆ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮಹೇಶ್ ಕಜೆ,ಶ್ರೀ ಮಠದ ಲೋಕಸಂಪರ್ಕಾಧಿಕಾರಿ ಹರಿಪ್ರಸಾದ್ ಪೆರಿಯಾಪು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |
February 6, 2025
7:40 AM
by: The Rural Mirror ಸುದ್ದಿಜಾಲ
ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ
February 6, 2025
7:33 AM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror