ನಮ್ಮಿಂದ ಸೇವೆ ಪಡೆದವರು ಕೂಡಾ ಸಂತುಷ್ಟರಾಗುವಂತಿರಬೇಕು. ತೋರಿಕೆಯ ಸೇವೆ ಬೇಡ; ಇದರಿಂದ ಯಾವ ಉಪಯೋಗವೂ ಇಲ್ಲ. ಜಗತ್ತಿನ ಎಲ್ಲರಿಗೂ ಸಲ್ಲುವ ಸೇವೆ ನಿಜವಾದ ಸೇವೆ ಎಂದು ಅಂಕಣಕಾರ ರೋಹಿತ್ ಚಕ್ರತೀರ್ಥ ಹೇಳಿದರು.
ಅವರು ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳು ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಯುವ ಸೇವಾ ಸಮಾವೇಶದಲ್ಲಿ ಮಾತನಾಡಿದರು.
ಆರೆಸ್ಸೆಸ್ ಮುಖಂಡ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮಾತನಾಡಿ ಸಮೂಹದ ಪರಿಕಲ್ಪನೆ ಭಾರತದಲ್ಲಿ ಮಾತ್ರ ಇದೆ. ಕಾಮ, ಕ್ರೋಧ, ಲೋಭ ಇವು ಮೂರು ನರಕಕ್ಕೆ ದಾರಿ. ಇವುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇಡೀ ವಿಶ್ವದ ವಿಕಾಸಕ್ಕೆ ಭಾರತದ ಕೊಡುಗೆ ಅಪಾರ. ಇದನ್ನು ಅರ್ಥ ಮಾಡಿಕೊಂಡು ಭಾರತೀಯ ಯುವ ಪೀಳಿಗೆ ಭಾರತೀಯ ಸಂಸ್ಕೃತಿ ಪರಂಪರೆಯ ಬಗ್ಗೆ ಗೌರವ ಹೊಂದಿ ಅದನ್ನು ಪಾಲಿಸಬೇಕು ಎಂದು ಸಲಹೆ ಮಾಡಿದರು.
ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳು, ಸೇವೆಯಲ್ಲಿರುವ ಸಮಾಧಾನ, ಸಂತೋಷ ಭೋಗದಲ್ಲಿಲ್ಲ; ಯುವಶಕ್ತಿಯನ್ನು ಭೋಗದ ಜತೆ ಜೋಡಿಸದೇ, ಸೇವೆಯ ಜತೆ ಜೋಡಿಸುವ ಕಾರ್ಯ ಆಗಬೇಕು ಎಂದರು. ಯುವಶಕ್ತಿ ಮತ್ತು ಸೇವೆ ಇಂದಿನ ಸಮಾಜದಲ್ಲಿ ಅಪಮೌಲ್ಯವಾಗಿದೆ. ಪ್ರಕೃತಿಯ, ದೇಶದ, ಸಮಾಜದ ಮತ್ತು ನಮ್ಮಿಂದ ಶ್ರೇಷ್ಠರ ಸೇವೆ ಮಾಡುವ ಮೂಲಕ ನಮ್ಮ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು. ಸೇವೆ ಮಾಡದಿದ್ದರೆ ಬದುಕು ಪೂರ್ಣವಾಗುವುದಿಲ್ಲ. ದೇಶಕ್ಕೆ, ದೇವರಿಗೆ, ಸಮಾಜಕ್ಕೆ, ಗುರುಸ್ಥಾನಕ್ಕೆ ಸೇವೆ ಮಾಡುವ ಸಂಕಲ್ಪ ತೊಡಿ. ಸೇವೆ ಇಲ್ಲದಿದ್ದರೆ ಜೀವನ ವ್ಯರ್ಥ. ಯುವಕರೆಲ್ಲ ಸೇವಕರಾಗಬೇಕು; ಸೇವಕರೆಲ್ಲ ಯುವಕರಾಗಿಯೇ ಇರಬೇಕು. ಮುಪ್ಪಿಗೆ ಮದ್ದು ಸೇವೆ. ಸೇವೆಯಿಂದ ನಾವು ಶಾಶ್ವತರಾಗುತ್ತೇವೆ. ಮುಪ್ಪು- ಸಾವುಗಳಿಲ್ಲದ ಸ್ಥಿತಿಗೆ ಬರಲು ಸಾಧ್ಯ. ಸೇವೆಯ ಮೂಲಕ ನಾವು ಅಜರಾಮರ, ಅಮರರಾಗಬಹುದು ಎಂದು ಹೇಳಿದರು.
ಹವ್ಯಕ ಮಹಾಮಂಡಲ ಅಧ್ಯಕ್ಷ ಆರ್.ಎಸ್.ಹೆಗಡೆ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮಹೇಶ್ ಕಜೆ,ಶ್ರೀ ಮಠದ ಲೋಕಸಂಪರ್ಕಾಧಿಕಾರಿ ಹರಿಪ್ರಸಾದ್ ಪೆರಿಯಾಪು ಉಪಸ್ಥಿತರಿದ್ದರು.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…