ಕ್ರೋಧದ ನಿಯಂತ್ರಣದಲ್ಲಿ ನೀವಿದ್ದಾಗ ಕ್ರೋಧ ದೋಷ. ನಿಮ್ಮ ನಿಯಂತ್ರಣದಲ್ಲಿ ಕೋಪ ಇದ್ದಾಗ ಅದು ಗುಣ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ವಿಶ್ಲೇಷಿಸಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿ, ಕೋಪ ಇರುವುದು ಆತ್ಮರಕ್ಷಣೆಗೆ; ಆದರೆ ಅದು ಇನ್ನೊಬ್ಬರಿಗೆ ಹಾನಿಯನ್ನು ಉಂಟು ಮಾಡಬಾರದು. ನಮ್ಮ ನಿಯಂತ್ರಣದಲ್ಲಿರುವ ಕೋಪ ಪ್ರತಿಯೊಬ್ಬರಿಗೂ ಬೇಕು ಎಂದು ಮಾರ್ಮಿಕವಾಗಿ ನುಡಿದರು.
ರಾಮ ಸ್ಥಾನಕ್ರೋಧ- ಜಿತಕ್ರೋಧ ಎಂಬ ಉಲ್ಲೇಖ ರಾಮಾಯಣದಲ್ಲಿದೆ. ಅಂದರೆ ರಾಮ ಕ್ರೋಧವನ್ನು ಗೆದ್ದವನು. ಕ್ರೋಧ ನಮ್ಮ ವಶದಲ್ಲಿರಬೇಕು. ಆದ್ದರಿಂದ ಕ್ರೋಧವನ್ನು ಹತ್ತಿಕ್ಕುವುದು ಸಮಸ್ಯೆಗೆ ಪರಿಹಾರವಲ್ಲ. ಕ್ರೋಧವನ್ನು ನಮ್ಮ ನಿಯಂತ್ರಣದಲ್ಲಿದ್ದರೆ ಅದು ದೋಷವಲ್ಲ; ಗುಣ ಎಂದು ವಿಶ್ಲೇಷಿಸಿದರು. ಯಾರ ಬಗ್ಗೆ, ಯಾವಾಗ ಸಿಟ್ಟು ಮಾಡಬೇಕು ಎಂಬ ವಿವೇಚನೆ ಬೇಕು. ಅಗತ್ಯ ಬಿದ್ದಾಗ ಮಾತ್ರವೇ ಸಿಟ್ಟು ಮಾಡಬೇಕು ಎಂದು ಕಿವಿಮಾತು ಹೇಳಿದರು.
ಉಕ್ಕಿಬರುವ ಕೋಪವನ್ನು ಯಾರು ನಿಗ್ರಹಿಸುತ್ತಾರೆಯೋ, ಕೋಪವೆಂಬ ಬೆಂಕಿಗೆ ತಾಳ್ಮೆಯ ನೀರನ್ನು ಯಾರು ಸುರಿಸುತ್ತಾರೆಯೋ ಅವರು ನಿಜವಾದ ಪುಣ್ಯಾತ್ಮರು ಎಂದು ಹನುಮಂತ ವಿವರಿಸಿದ್ದಾನೆ. ಸಿಟ್ಟು ಬಂದಾಗ ಎಂಥ ಕಾರ್ಯವನ್ನೂ ಮಾಡುತ್ತಾನೆ. ಸಿಟ್ಟಿಗಿಂತ ಕ್ಷಮೆ ದೊಡ್ಡದು ಎಂದು ಆಂಜನೇಯ ಬಣ್ಣಿಸಿದ್ದಾನೆ. ಹಾವು ಪೊರೆ ಕಳಚಿಕೊಳ್ಳುವಂತೆ ನಾವು ಸಿಟ್ಟನ್ನು ಬಿಡಬೇಕು ಎಂದು ಸಲಹೆ ಮಾಡಿದರು.ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…