ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ

July 26, 2025
2:08 PM

ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ. ಮನೆಗೆ ಸುಭದ್ರ ಅಡಿಪಾಯ ಹೇಗೆ ಅಗತ್ಯವೋ ನಮ್ಮ ಬದುಕಿಗೂ ಧರ್ಮದ ತಳಹದಿ ಅಗತ್ಯ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು.

ಅಶೋಕೆಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು ಶುಕ್ರವಾರ ಸಿದ್ದಾಪುರ ಮಂಡಲದ ಬಾನ್ಕುಳಿ, ಇಟಗಿ, ದೊಡ್ಮನೆ, ಚಪ್ಪರಮನೆ, ತಾಳಗುಪ್ಪ ಮತ್ತು ಇಡುವಾಣಿ ವಲಯಗಳ ಶಿಷ್ಯರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು. ಗೋಡೆ ಎಂದರೆ ಸಂಪತ್ತು; ಛಾವಣಿ ಎನ್ನುವುದು ಕಾಮನೆಗಳು. ಧರ್ಮದ ತಳಹದಿ ಇದ್ದರೆ ಮಾತ್ರ ಉಳಿದ ಎರಡು ಸಿದ್ಧಿಸುತ್ತವೆ. ಜೀವನದಲ್ಲಿ ತಪ್ಪು ಮಾಡದೇ ಧರ್ಮದ ಬೆಳಕಲ್ಲಿ ಜೀವನ ಮಾಡಬೇಕು ಎಂದು ಸಲಹೆ ಮಾಡಿದರು. ಸೇವೆ ಎನ್ನುವುದು ಧರ್ಮಸಂಗ್ರಹಕ್ಕೆ ಅವಕಾಶ. ಪೀಠದ ಸೇವೆ ಜನ್ಮ ಜನ್ಮಾಂತರದಲ್ಲಿ ನಿಮ್ಮನ್ನು ಕಾಪಾಡುತ್ತವೆ. ಪುಣ್ಯಸಂಗ್ರಹಕ್ಕೆ ಇಂಥ ಜವಾಬ್ದಾರಿಗಳು ಒಳ್ಳೆಯ ಮಾರ್ಗ. ಸಿಕ್ಕಿದ ಸೇವಾ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡು ಧನ್ಯತೆ ಪಡೆಯಬೇಕು ಎಂದು ಸೂಚಿಸಿದರು.

ವರ್ಷಕಾಲದಲ್ಲಿ ಗುರುದರ್ಶನಾರ್ಥವಾಗಿ, ರಾಮನ ದರ್ಶನಕ್ಕಾಗಿ ಆಗಮಿಸಿದ ಸಮಸ್ತ ಶಿಷ್ಯರ ಮೇಲೆ ಅನುಗ್ರಹದ ಮಳೆ ಸುರಿಯಲಿ ಎಂದು ಹರಸಿದರು. ಗೋಮಾತೆಯ ಸೇವೆ ಸಮಾಜದ ಪ್ರತಿಯೊಬ್ಬ ಶಿಷ್ಯರ ಕರ್ತವ್ಯ. ಗೋಸ್ವರ್ಗವನ್ನು ಬೆಳೆಸುವುದು ಸಿದ್ದಾಪುರ ಮಂಡಲದ ಸಮಸ್ತ ಶಿಷ್ಯರ ಕರ್ತವ್ಯ ಎಂದರು. ಈ ಬಾರಿಯ ನವರಾತ್ರಿ ಉತ್ಸವ ಸಾಗರದಲ್ಲಿ ನಡೆಯಲಿದ್ದು, ಸಿದ್ದಾಪುರ ಮಂಡಲದ ಜನತೆ ಈ ಪುಣ್ಯಕಾರ್ಯದಲ್ಲಿ ಪಾಲ್ಗೊಂಡು ಆತ್ಮೈಶ್ವರ್ಯ ಪಡೆದುಕೊಳ್ಳಲು ಅವಕಾಶ ಒದಗಿಬಂದಿದೆ ಎಂದು ಹೇಳಿದರು.

ಪುಣ್ಯನಿಧಿ ಸಂಪಾದನೆಗೆ ಅನುಷ್ಠಾನದ ಮಾರ್ಗವನ್ನು ಪ್ರತಿಯೊಬ್ಬರೂ ಅನುಸರಿಸಬೇಕು. ಧರ್ಮಧನವನ್ನು ಅಂತರಂಗದಲ್ಲಿ ಕೂಡಿಟ್ಟುಕೊಳ್ಳಬೇಕು. ಚಾತುರ್ಮಾಸ್ಯ ಇದಕ್ಕೆ ಹೇಳಿ ಮಾಡಿಸಿದ ಸಮಯ. ಸನಾತನ ಸಂಸ್ಕೃತಿಯ ಹಿನ್ನೆಲೆ ಇರುವ, ಶಂಕರಾಚಾರ್ಯರಿಂದ ಸ್ಥಾಪಿತವಾದ ಅವಿಚ್ಛಿನ್ನ ಪರಂಪರೆಯ ಪೀಠದ ಶಿಷ್ಯರಾಗಿ ನಮಗೆ ದೊಡ್ಡ ಹೊಣೆಗಾರಿಕೆ ಇದೆ ಎಂದು ಕಿವಿಮಾತು ಹೇಳಿದರು.

ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪ್ಪು, ಪ್ರಧಾನ ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಚಾತುರ್ಮಾಸ್ಯ ತಂಡದ ಪ್ರಧಾನ ಸಂಯೋಜಕ ಮಂಜುನಾಥ ಸುವರ್ಣಗದ್ದೆ, ವಿವಿವಿ ಆಡಳಿತಾಧಿಕಾರಿ ಡಾ.ಟಿ.ಜಿ.ಪ್ರಸನ್ನಕುಮಾರ್, ಮುಖ್ಯ ಅಭಿಯಂತರ ವಿಷ್ಣು ಬನಾರಿ ಮತ್ತಿತರರು ಉಪಸ್ಥಿತರಿದ್ದರು. ಚಾತುರ್ಮಾಸ್ಯ ಅಂಗವಾಗಿ ವೇದಮೂರ್ತಿ ಉಂಚಗೇರಿ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಸಾಮವೇದ ಪಾರಾಯಣ ನಡೆಯುತ್ತಿದೆ.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?
December 16, 2025
1:47 PM
by: ಸಾಯಿಶೇಖರ್ ಕರಿಕಳ
ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ
December 16, 2025
7:22 AM
by: ರೂರಲ್‌ ಮಿರರ್ ಸುದ್ದಿಜಾಲ
ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ
December 16, 2025
7:20 AM
by: ರೂರಲ್‌ ಮಿರರ್ ಸುದ್ದಿಜಾಲ
ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ
December 16, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror