Advertisement
ಸುದ್ದಿಗಳು

ಕಲುಷಿತ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ: ರಾಘವೇಶ್ವರ ಶ್ರೀ

Share

ನಾಲಿಗೆ ಶುದ್ಧವಾಗಿದ್ದರೆ ಮಾತ್ರ ನಮ್ಮ ವ್ಯಕ್ತಿತ್ವವೂ ಶುದ್ಧವಾಗಿರಲು ಸಾಧ್ಯ; ಆದ್ದರಿಂದ ಕಲುಷಿತಗೊಂಡಿರುವ ನಮ್ಮ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ ನೀಡೋಣ ಎಂದು ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.

ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 24ನೇ ದಿನವಾದ ಶನಿವಾರ ಉತ್ತರ ಬೆಂಗಳೂರು ಮಂಡಲದ ರಾಜಾಮಲ್ಲೇಶ್ವರ, ಮಹಾಲಕ್ಷ್ಮಿ, ವರ್ತೂರು, ಭುವನಗಿರಿ ಮತ್ತು ನಂದಿನಿ ವಲಯಗಳ ಶಿಷ್ಯಭಕ್ತರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು. ಭಾಷೆ ನಮ್ಮ ಸಂಸ್ಕೃತಿಯ ಕೈಗನ್ನಡಿ. ಭಾಷೆ ವಾಗ್ದೇವಿ ಸರಸ್ವತಿಗೆ ಪ್ರಿಯವಾಗುವಂತಿರಬೇಕು. ಆದರೆ ಇಂದಿನ ಕನ್ನಡದಲ್ಲಿ ಅರ್ಧದಷ್ಟು ಇಂಗ್ಲಿಷ್ ಪದಗಳು, ಪರ್ಷಿಯನ್, ಅರೇಬಿಕ್‍ನಂಥ ಅನ್ಯ ಭಾಷೆಯ ಶಬ್ದಗಳು ಸೇರಿ ಭಾಷೆ ಸಂಪೂರ್ಣ ಕಲಬೆರಕೆಯಾಗಿದೆ. ಇದನ್ನು ಶುದ್ಧವಾಗಿಸಿ ಮುಂದಿನ ಪೀಳಿಗೆಗೆ ನೀಡುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಸ್ವಭಾಷೆ, ಸ್ವಧರ್ಮ, ನಮ್ಮ ಆಚರಣೆಗಳೇ ಶ್ರೇಷ್ಠ. ಇದು ಪೂರ್ವಜರು ನಮಗೆ ನೀಡಿದ ಬಳುವಳಿ. ಸ್ವಧರ್ಮ ಪಾಲನೆಯೇ ಶ್ರೇಷ್ಠ ಎಂದು ಶ್ರೀಕೃಷ್ಣ ಭಗವದ್ಗೀತೆಯಲ್ಲೂ ಉಲ್ಲೇಖಿಸಿದ್ದಾನೆ. ನಮ್ಮ ಪೂರ್ವಜರು ಆಡುತ್ತಿದ್ದ ಭಾಷೆಯನ್ನು ಮತ್ತೆ ಚಾಲ್ತಿಗೆ ತರಬೇಕು. ಅಪರೂಪದ ಪದಗಳು ನಾಶವಾಗುವ ಮುನ್ನ ಅವುಗಳನ್ನು ಉಳಿಸುವ ಪ್ರಯತ್ನ ಮಾಡೋಣ. ಹಳೆ ಸಂಸ್ಕೃತಿ- ಸಂಸ್ಕಾರಗಳನ್ನು ಉಳಿಸಿ ಬೆಳೆಸುವ ಕಾರ್ಯ ಆಗಬೇಕು ಎಂದು ಕರೆ ನೀಡಿದರು.
ಭಾಷೆಯಿಂದ ಮೊದಲ್ಗೊಂಡು ನಮ್ಮತನ, ನಮ್ಮ ಉಡುಗೆ- ತೊಡುಗೆ, ನಮ್ಮ ಆಹಾರ- ವಿಹಾರ, ನಮ್ಮ ಸಂಸ್ಕೃತಿ- ಪರಂಪರೆಗೆ ಮರಳುವ ಅಗತ್ಯವಿದೆ ಎಂದರು.

ಮೂಲದಿಂದ ದೂರ ಹೋಗಿರುವ ಶಿಷ್ಯರನ್ನು ಮತ್ತೆ ಶ್ರೀಮಠದ ಛತ್ರಿಯಡಿ ತರುವ ಗುರುತರ ಹೊಣೆಗಾರಿಕೆಯನ್ನು ಪದಾಧಿಕಾರಿಗಳು ವಹಿಸಿಕೊಳ್ಳಬೇಕು ಎಂದು ಸೂಚಿಸಿದರು. ಸಮಾಜದ ಶಿಷ್ಯರೆಲ್ಲರೂ ಸೇವಾಧಾರಿಗಳಾಗುವಂತೆ ಪ್ರೇರೇಪಿಸಬೇಕು. ನಮ್ಮತನ, ನಮ್ಮ ಸಂಸ್ಕೃತಿ ಪರಂಪರೆ ಉಳಿಯಬೇಕು ಎಂದರು.ಚಾತುರ್ಮಾಸ್ಯದ ಶುಭ ಸಂದರ್ಭದಲ್ಲಿ ರಾಮನ ಕಡೆಗೆ, ಮುಕ್ತಿಯ ಕಡೆಗೆ ನಮ್ಮನ್ನು ಒಯ್ಯುವ ಆಶೀರ್ವಾದವನ್ನು ಗುರು ಪರಂಪರೆ ಕರುಣಿಸಲಿ ಎಂದು ಆಶಿಸಿದರು.

ಮಾಜಿ ತಾಲೂಕು ಪಂಚಾಯ್ತಿ ಸದಸ್ಯ ಮಹೇಶ್ ಶೆಟ್ಟಿಯವರ ನೇತೃತ್ವದಲ್ಲಿ ಕೆ.ಎಸ್.ಹೆಗ್ಡೆ ಆಸ್ಪತ್ರೆ ವತಿಯಿಂದ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದ ವೈದ್ಯರು ಮತ್ತು ಸಿಬ್ಬಂದಿ ಶ್ರೀಗಳಿಂದ ಆಶೀರ್ವಾದ ಪಡೆದರು. ರೋಟರಿ ಅಂತರರಾಷ್ಟ್ರೀಯ ತಾಂತ್ರಿಕ ಸಲಹೆಗಾರ ಗಣೇಶ್ ಹೆಗಡೆ, ಚಾತುರ್ಮಾಸ್ಯ ತಂಡದ ಪ್ರಧಾನ ಸಂಯೋಜಕ ಮಂಜುನಾಥ ಸುವರ್ಣಗದ್ದೆ, ಹವ್ಯಕ ಮಹಾಮಂಡಲದ ಅಧ್ಯಕ್ಷ ಹರಿಪ್ರಸಾದ್ ಪೆರಿಯಪ್ಪು, ಪ್ರಧಾನ ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಪದಾಧಿಕಾರಿಗಳಾದ ಕೆ.ಬಿ.ರಾಮಮೂರ್ತಿ, ಜಿ.ಎಸ್.ಹೆಗಡೆ, ಈಶ್ವರ ಪ್ರಸಾದ್ ಕನ್ಯಾನ, ರಮೇಶ್ ಹೆಗಡೆ ಗುಂಡೂಮನೆ, ವಿವಿವಿ ಆಡಳಿತಾಧಿಕಾರಿ ಡಾ.ಟಿ.ಜಿ.ಪ್ರಸನ್ನಕುಮಾರ್, ಪರಂಪರಾ ವಿಭಾಗದ ಪ್ರಾಚಾರ್ಯ ಸತ್ಯನಾರಾಯಣ ಶರ್ಮಾ, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ ಗೋಳಗೋಡು, ಬೆಂಗಳೂರು ಮಂಡಲ ಅಧ್ಯಕ್ಷ ಎಲ್.ಆರ್.ಹೆಗಡೆ, ಕಾರ್ಯದರ್ಶಿ ಮುರಳಿಕೃಷ್ಣ ಕುಕ್ಕುಪುಣಿ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

15 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

15 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

16 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

24 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago