Advertisement
ಧಾರ್ಮಿಕ

ತಾಳ್ಮೆ ಜೀವನದ ಅಮೂಲ್ಯ ಸಂಪತ್ತು: ರಾಘವೇಶ್ವರ ಶ್ರೀ

Share
ತಾಳ್ಮೆ ಪ್ರತಿಯೊಬ್ಬರ ಜೀವನದ ಅಮೂಲ್ಯ ಸಂಪತ್ತು. ತಾಳ್ಮೆ ಎಂಬ ಮಹಾ ಸಂಪತ್ತು ನಮ್ಮೆಲ್ಲರ ಬದುಕಿನಲ್ಲಿ, ವ್ಯಕ್ತಿತ್ವದಲ್ಲಿ ಬರಲಿ; ಈ ಮೂಲಕ ಜೀವನ ಸುಖಮಯವಾಗಲಿ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಆಶಿಸಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹನ್ನೊಂದನೇ ದಿನವಾದ ಶನಿವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ತಾಳ್ಮೆ ಕಡಿಮೆ ಇದ್ದರೆ, ನಿರೀಕ್ಷಿತ ಫಲ ಪಡೆಯಲು ಸಾಧ್ಯವಿಲ್ಲ. ತಾಳ್ಮೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಆಗ ಜೀವನ ಸುಂದರವಾಗುತ್ತದೆ” ಎಂದರು.
ಬೆಳಿಗ್ಗೆ ಕಾಳು ಬಿತ್ತಿ ಸಂಜೆಗೆ ಪೈರು ಬರಲು ಸಾಧ್ಯವೇ? ಹೀಗೆ ಜೀವನದಲ್ಲೂ ತಾಳ್ಮೆ ಅತ್ಯಂತ ಮಹತ್ವ. ಜೀವನದಲ್ಲೂ ನಾವು ಅವಸರ ಮಾಡುತ್ತೇವೆ. ಇದು ಅನಾಹುತಕ್ಕೆ ಕಾರಣವಾಗುತ್ತದೆ ಎಂದು ಮಂಕು ತಿಮ್ಮನ ಕಗ್ಗವನ್ನು ಉದಾಹರಿಸಿದರು. ಜೀವನದಲ್ಲಿ ಕಾಲಕ್ಕೆ ಅತ್ಯಂತ ಮಹತ್ವ ಇದೆ. ಸೂಕ್ತ ಕಾಲಕ್ಕೆ ಕಾಯುವ ತಾಳ್ಮೆ ನಮಗೆ ಬೇಕು. ವೇಳೆಯ ಗಡುವು ಮರೆತರೆ ಹದ ತಪ್ಪುತ್ತದೆ. ತಾಳುಮೆಯೇ ಪರಿಪಾಕ ಎಂದು ಡಿವಿಜಿಯವರು ಕಗ್ಗದಲ್ಲಿ ಬಣ್ಣಿಸಿದ್ದಾರೆ ಎಂದು ವಿವರಿಸಿದರು.
ಒಬ್ಬ ವ್ಯಕ್ತಿಯ ಬಗ್ಗೆ ತೀರ್ಮಾನಕ್ಕೆ ಬರುವ ಮುನ್ನ ಸಾಕಷ್ಟು ಯೋಚಿಸಬೇಕು. ಯಾವ ವಿಷಯದ ಬಗ್ಗೆಯೂ ತೀರ್ಮಾನಕ್ಕೆ ಬರುವಾಗ ಅವಸರ ಮಾಡದೇ, ಹತ್ತು ಬಾರಿ ಪರಾಮರ್ಶೆ ಮಾಡಬೇಕು ಎಂದು ಸುಂದರ ಕಥೆಯೊಂದರ ಮೂಲಕ ನಿರೂಪಿಸಿದರು. ಎಷ್ಟೋ ಬಾರಿ ನಮ್ಮ ಜೀವನದಲ್ಲಿ ಕಲಹ, ಯುದ್ಧಗಳಿಗೆ  ತಪ್ಪುಗ್ರಹಿಕೆ ಕಾರಣವಾಗುತ್ತದೆ. ಸ್ವಲ್ಪ ತಾಳ್ಮೆ, ಸಮಾಧಾನ ಬೇಕು. ಎಲ್ಲ ದೃಷ್ಟಿಕೋನಗಳಿಂದ ಯೋಚನೆ ಮಾಡಬೇಕು. ಪರಾಮರ್ಶೆ ಮಾಡದಿದ್ದಾಗ ನಾವು ಬಹಳಷ್ಟನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದರು.
ಶನಿವಾರದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಚ್.ಸಿ.ಆಕಾಶ್ ಹಾಗೂ ಆದಿತ್ಯ ಎಚ್.ಸಿ. ಗಮಕ ವಾಚನ ನಡೆಸಿಕೊಟ್ಟರು. ಧಾರ್ಮಿಕ ಕಾರ್ಯಕ್ರಮದಲ್ಲಿ ರಾಮತಾರಕ ಹವನ, ರುದ್ರಹೋಮ, ಆಂಜನೇಯನ ಪ್ರೀತ್ಯರ್ಥವಾಗಿ ತ್ರಿಮಧುರಯುಕ್ತ ಬಾಳೆಹಣ್ಣಿನ ಹವನವನ್ನು ನೆರವೇರಿಸಲಾಯಿತು.
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

1 hour ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

2 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

10 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

11 hours ago