ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿದ್ದ ರಾಹುಲ್ ಗಾಂಧಿಯವರಿಗೆ ಇಂದು ಗುಜರಾತ್ ಹೈಕೋರ್ಟ್ ಶಾಕ್ ನೀಡಿದೆ. ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಶಿಕ್ಷೆಯ ವಿರುದ್ಧ ಗುಜರಾತ್ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.
Advertisement
ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ #RahulGandhi ವಿರುದ್ಧದ ಶಿಕ್ಷೆಯ ವಿರುದ್ಧ ಗುಜರಾತ್ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ರಾಹುಲ್ ಗಾಂಧಿಗೆ ಹಿನ್ನಡೆಯಾಗಿದೆ. ಎರಡು ವರ್ಷಗಳ ಶಿಕ್ಷೆ ಕಾಯಂ. ಮಾರ್ಚ್ 23ರಂದು ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಬಳಿಕ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ರಾಹುಲ್ ಗಾಂಧಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಶಿಕ್ಷೆ ಪ್ರಕಟವಾದ ಬಳಿಕ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ. ಅವರು ಏಪ್ರಿಲ್ 3 ಕ್ಕೆ ತಮ್ಮ ಶಿಕ್ಷೆಯ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.
2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ತಮ್ಮ ಭಾಷಣದಲ್ಲಿ ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ ಎಂದು ಹೇಳಿದ್ದರು. ಈ ಕುರಿತು ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. 2019ರ ಏಪ್ರಿಲ್ 13ರಂದು ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ, ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಎಲ್ಲಾ ಉಪನಾಮಗಳು ಒಂದೇ ರೀತಿ ಇದೆ, ಎಲ್ಲಾ ಕಳ್ಳರ ಉಪನಾಮ ಮೋದಿ ಏಕೆ?”ಎಂದು ಹೇಳಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement