Advertisement
ಸುದ್ದಿಗಳು

# RahulGandhi | ರಾಹುಲ್ ಗಾಂಧಿಗೆ 2 ವರ್ಷಗಳ ಶಿಕ್ಷೆ ಖಾಯಂ | ಗುಜರಾತ್ ಹೈಕೋರ್ಟ್​ ಇಂದು ತೀರ್ಪು ಪ್ರಕಟ |

Share

ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿದ್ದ ರಾಹುಲ್ ಗಾಂಧಿಯವರಿಗೆ ಇಂದು ಗುಜರಾತ್ ಹೈಕೋರ್ಟ್  ಶಾಕ್ ನೀಡಿದೆ. ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಶಿಕ್ಷೆಯ ವಿರುದ್ಧ ಗುಜರಾತ್ ಹೈಕೋರ್ಟ್​ ಇಂದು ತೀರ್ಪು ಪ್ರಕಟಿಸಿದೆ.

ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ #RahulGandhi ವಿರುದ್ಧದ ಶಿಕ್ಷೆಯ ವಿರುದ್ಧ ಗುಜರಾತ್ ಹೈಕೋರ್ಟ್​ ಇಂದು ತೀರ್ಪು ಪ್ರಕಟಿಸಿದೆ. ರಾಹುಲ್​ ಗಾಂಧಿಗೆ ಹಿನ್ನಡೆಯಾಗಿದೆ. ಎರಡು ವರ್ಷಗಳ ಶಿಕ್ಷೆ ಕಾಯಂ.  ಮಾರ್ಚ್​ 23ರಂದು ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಬಳಿಕ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ರಾಹುಲ್ ಗಾಂಧಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಶಿಕ್ಷೆ ಪ್ರಕಟವಾದ ಬಳಿಕ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ. ಅವರು ಏಪ್ರಿಲ್ 3 ಕ್ಕೆ ತಮ್ಮ ಶಿಕ್ಷೆಯ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.

2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ತಮ್ಮ ಭಾಷಣದಲ್ಲಿ ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ ಎಂದು ಹೇಳಿದ್ದರು. ಈ ಕುರಿತು ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. 2019ರ ಏಪ್ರಿಲ್ 13ರಂದು ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ, ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಎಲ್ಲಾ ಉಪನಾಮಗಳು ಒಂದೇ ರೀತಿ ಇದೆ, ಎಲ್ಲಾ ಕಳ್ಳರ ಉಪನಾಮ ಮೋದಿ ಏಕೆ?”ಎಂದು ಹೇಳಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

13 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

1 day ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

1 day ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

1 day ago