ಲೋಕಸಭೆ ಚುನಾವಣೆ(Lok sabha Election) ಮುಗಿದರು ಇನ್ನು ಹವಾ ನಿಂತಿಲ್ಲ. ಇದೀಗ ಕಾಂಗ್ರೆಸ್(Congress) ನಾಯಕ ರಾಹುಲ್ ಗಾಂಧಿ(Rahul Gandhi) ಎರಡು ಕ್ಷೇತ್ರದಲ್ಲಿ ಗೆದ್ದು ಬೀಗಿದ್ದರು. ಈಗ ಒಂದು ಕ್ಷೇತ್ರವನ್ನು ಆರಿಕೊಂಡ ಪರಿಣಾಮ ರಾಯ್ ಬರೇಲಿಯನ್ನು(Ray Bareli) ಇಟ್ಟುಕೊಂಡು ವಯನಾಡು ಅನ್ನು ಬಿಟ್ಟುಕೊಡಲು ನಿರ್ಧರಿಸಿದ್ದಾರೆ. ಅವರು ರಾಯ್ ಬರೇಲಿಯ ಸಂಸದರಾಗಿ ಉಳಿಯಲಿದ್ದಾರೆ. ವಯನಾಡ್‌ನಿಂದ ಉಪಚುನಾವಣೆಯಲ್ಲಿ (Wayanad Lok Sabha Election) ಪ್ರಿಯಾಂಕಾ ಗಾಂಧಿ (Priyanka Gandhi) ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ಇದರೊಂದಿಗೆ ಗಾಂಧಿ ಕುಟುಂಬದ ಮತ್ತೊಬ್ಬರು ದಕ್ಷಿಣದಿಂದ ಚುನಾವಣಾ ರಾಜಕೀಯಕ್ಕೆ ಬರಲಿದ್ದಾರೆ.
ಗಾಂಧಿ ಕುಟುಂಬವು ದಕ್ಷಿಣ ಭಾರತದೊಂದಿಗೆ ಹಳೆಯ ಸಂಬಂಧವನ್ನು ಹೊಂದಿದೆ. ಇಂದಿರಾ ಗಾಂಧಿಯವರು 1978ರ ಉಪಚುನಾವಣೆಯಲ್ಲಿ ಕರ್ನಾಟಕದ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಪ್ರಧಾನಿಯಾಗಿದ್ದರು. ಇದಾದ ನಂತರ ಇಂದಿರಾ ಗಾಂಧಿ ಅವರು 1980ರಲ್ಲಿ ಆಂಧ್ರದ ಮೇದಕ್ ಲೋಕಸಭಾ ಕ್ಷೇತ್ರದಿಂದ ಗೆದ್ದಿದರು. 1999ರಲ್ಲಿ ಸೋನಿಯಾ ಗಾಂಧಿ ಅವರು ಕೂಡ ದಕ್ಷಿಣ ಭಾರತದಿಂದ ರಾಜಕೀಯ ಜೀವನ ಆರಂಭಿಸಿದರು. ಅವರು 1999ರಲ್ಲಿ ಅಮೇಥಿ ಮತ್ತು ಕರ್ನಾಟಕದ ಬಳ್ಳಾರಿ ಲೋಕಸಭಾ ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸಿದ್ದರು ಮತ್ತು ಎರಡೂ ಸ್ಥಾನಗಳನ್ನು ಗೆದ್ದಿದ್ದರು. ಆದರೆ, ಬಳಿಕ ಅವರು ಬಳ್ಳಾರಿ ಸೀಟು ತೊರೆದಿದ್ದರು.
ವಯನಾಡ್‌ನಿಂದ ಸ್ಮೃತಿ ಇರಾನಿ..? : ಪ್ರಿಯಾಂಕಾ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರದಿಂದ ಉಪ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ ನಂತರ, ಈ ಕ್ಷೇತ್ರದಿಂದ ಬಿಜೆಪಿ ತನ್ನ ಅಭ್ಯರ್ಥಿಯಾಗಿ ಯಾರನ್ನು ಕಣಕ್ಕಿಳಿಸುತ್ತದೆ ಎಂಬ ಚರ್ಚೆ ಸಾಮಾಜಿಕ ಮಾಧ್ಯಮ ಸೇರಿದಂತೆ ರಾಜಕೀಯ ವಲಯಗಳಲ್ಲಿ ತೀವ್ರಗೊಂಡಿದೆ. ಸದ್ಯ ವಯನಾಡ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪಾಲಿನ ಡೈನಾಮಿಕ್ ನಾಯಕಿ ಸ್ಮೃತಿ ಇರಾನಿ (Smriti irani) ಅವರನ್ನು ಬಿಜೆಪಿ ಕಣಕ್ಕಿಳಿಸಬಹುದು ಎಂಬ ಚರ್ಚೆಯೂ ನಡೆಯುತ್ತಿದೆ.
ಸದ್ಯ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವುಗೊಂಡಿರುವ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುತೂಹಲ ಕೆರಳಿಸಿದ್ದು, ಪ್ರಿಯಾಂಕ ಗಾಂಧಿಯನ್ನು ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಬಿಜೆಪಿ ಸ್ಮೃತಿ ಇರಾನಿಯನ್ನು ಕಣಕ್ಕಿಳಿಸಿ ಸ್ಪರ್ಧೆಯನ್ನು ರೋಚಕಗೊಳಿಸುತ್ತಾ ಅಥವಾ ತ್ರಿಶ್ಯೂರ್‌ನಲ್ಲಿ ಸೋತಿರುವ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸೇರಿದಣಂತೆ ಬೇರೆ ಅಭ್ಯರ್ಥಿಯನ್ನು ಹಾಕುತ್ತಾರಾ ಅನ್ನೋದನ್ನು ಕಾದು ನೋಡಬೇಕಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…