ಮೋದಿ ಉಪನಾಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದ ಸಂಸದ ರಾಹುಲ್ ಗಾಂಧಿ ಸಂಸದೀಯ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿತ್ತು. ಆದರೆ ಈಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಂಸತ್ ಸ್ಥಾನದ ಅನರ್ಹತೆಯನ್ನ ಲೋಕಸಭೆಯ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ವಾಪಸ್ ಪಡೆದಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರ ಸಂಸದೀಯ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಶುಕ್ರವಾರ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಸ್ಪೀಕರ್ ಈ ನಿರ್ಧಾರ ಕೈಗೊಂಡಿದ್ದಾರೆ.
ಸುಪ್ರೀಂ ಆದೇಶ ಬೆನ್ನಲ್ಲೇ ಸೋಮವಾರ ಲೋಕಸಭೆಯ ಸ್ಪೀಕರ್ ಸದಸ್ಯತ್ವವನ್ನ ಮರಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಲೋಕಸಭೆ ಅಧಿವೇಶನಕ್ಕೆ ಹಾಜರಾಗಬಹುದಾಗಿದೆ. ರಾಹುಲ್ ಅವರು 2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್ ಅವರು ಎರಡು ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು.
Source : Online media