ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರ ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದಾರೆ.ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬೆಳಗ್ಗೆಯಿಂದ 2 ಬಾರಿ ಬಂಗಲೆಗೆ ಭೇಟಿ ನೀಡಿದ್ದಾರೆ. ನಂತರ ಮಧ್ಯಾಹ್ನದ ವೇಳೆಗೆ ರಾಹುಲ್ ಗಾಂಧಿ ಕೀಗಳನ್ನು ಹಸ್ತಾಂತರಿಸಿದ್ದಾರೆ.
2005 ರಿಂದ ರಾಹುಲ್ ಗಾಂಧಿ 12 ತುಘಲಕ್ ಲೇನ್ ಬಂಗಲೆಯಲ್ಲಿ ವಾಸಿಸುತ್ತಿದ್ದರು. ಆದರೆ ಕಳೆದ ತಿಂಗಳ ಕೊನೆಯಲ್ಲಿ ಸಂಸತ್ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹಗೊಂಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಸಂಸದ ಸಿ.ಆರ್. ಪಾಟೀಲ್ ನೇತೃತ್ವದ ಲೋಕಸಭೆಯ ವಸತಿ ಸಮಿತಿಯು ಏಪ್ರಿಲ್ 22ರೊಳಗೆ ದೆಹಲಿಯಲ್ಲಿರುವ ತುಘಲಕ್ ಲೇನ್ ಬಂಗಲೆ ತೊರೆಯುವಂತೆ ಲೋಕಸಭಾ ವಸತಿ ಸಮಿತಿ ನೋಟಿಸ್ ನೀಡಿತ್ತು. ಮನೆ ಖಾಲಿ ಮಾಡಲು ಒಪ್ಪಿಗೆ ಸೂಚನೆ ನೀಡುತ್ತಿದ್ದಂತೆ ರಾಹುಲ್ ಗಾಂಧಿಗೆ ಪಕ್ಷದ ನಾಯಕರಿಂದ ಮನೆ ಆಫರ್‌ಗಳು ಹರಿದು ಬಂದಿತ್ತು.
ಆದರೆ ರಾಹುಲ್ ಗಾಂಧಿ ಅವರು ಸೋನಿಯಾ ಗಾಂಧಿ ಅವರ ಜನಪಥ್ ನಿವಾಸಕ್ಕೆ ತೆರಳುತ್ತಿದ್ದಾರೆ. ಆದರೂ ರಾಹುಲ್ ಗಾಂಧಿ ಅವರು ಕೆಲವು ನಿಯಮಗಳ ಪ್ರಕಾರ ಬಂಗಲೆಯಿಂದ ಹೊರಹೋಗಬೇಕಾಗಿದೆ. ಕಾಂಗ್ರೆಸ್ ನಾಯಕರು ಕೇಂದ್ರದ ವಿರುದ್ಧ ರಾಜಕೀಯ ಸೇಡಿನ ಆರೋಪ ಮಾಡಿದ್ದಾರೆ.
ಕಳೆದ ವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಮ್ಮ ಮನೆಯನ್ನು ಖಾಲಿಗೊಳಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ತುಘಲಕ್ ಲೇನ್‍ನ ಬಂಗಲೆ ಹೊರಗೆ 2 ಟ್ರಕ್‍ಗಳಲ್ಲಿ ಕಾರ್ಮಿಕರು ಮನೆಯಲ್ಲಿದ್ದ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…